ರಾಮನಗರ: ಕಾರಿನಲ್ಲೇ ಕುಳಿತು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಭಾನುವಾರ ಸಂಜೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸಿ ಪ್ರದೀಪ್ (47) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಉದ್ಯಮಿ ಪ್ರದೀಪ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಡೆತ್ ನೋಟ್ನಲ್ಲಿ ಪ್ರಭಾವಿ ರಾಜಕಾರಣಿ ಸೇರಿದಂತೆ ಆರು ಜನರ ಹೆಸರು ಬರೆದಿಟ್ಟಿದ್ದಲ್ಲದೆ, ಸಾವಿನ ಬಗ್ಗೆಯೂ ವಿವರವಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಗ್ಗಲಿಪುರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ.. ಬೀದರ್ ಜಿಲ್ಲೆಯಲ್ಲಿ ಹರಿದ ನೆತ್ತರು