ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಎದುರಾಳಿಗಳನ್ನು ಟೀಕೆ ಮಾಡುವ ಭರದಲ್ಲಿ ವೈಯಕ್ತಿಕ ತೇಜೋವಧೆ ಮಾಡುವುದನ್ನು ಮೈಗೂಡಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ವೈಯಕ್ತಿಕವಾಗಿ ಟೀಕಿಸುವುದು ಸರ್ವಶ್ರೇಷ್ಠ ರಾಜಕಾರಣಿ ಎಚ್.ಡಿ.ಕುಮಾರಸ್ವಾಮಿ ಅವರ ಗುಣ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಟಾಂಗ್ ಕೊಟ್ಟರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಟೀಕೆ ಮಾಡುವ ಸಂದರ್ಭದಲ್ಲಿ ಅಂಕಿ ಅಂಶಗಳ ಸಮೇತ ಮಾತನಾಡುವುದನ್ನು ಬಿಟ್ಟು, ತೀರ ಕ್ಷುಲ್ಲಕವಾಗಿ ಮಾತನಾಡಿದರೆ, ಬೀದಿಯಲ್ಲಿ ನಿಲ್ಲಿಸಿ ಕೇಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಕಾಡಾನೆ ದಾಳಿಗೆ ತಾಲ್ಲೂಕಿನ ಚನ್ನಿಗನ ಹೊಸಹಳ್ಳಿ ರೈತ ಮಹಿಳೆ ಅಸುನೀಗಿದ್ದನ್ನು ಸ್ಮರಿಸಿ ಅವರು ವಿಷಾದ ವ್ಯಕ್ತಪಡಿಸಿದರು. ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿದ್ದು, ಈ ಸಮಸ್ಯೆಗೆ ಒಂದು ತಾರ್ಕಿಕ ಅಂತ್ಯ ಕಾಣಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಇದನ್ನೂ ಓದಿ : 'ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ, 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ'