ರಾಮನಗರ: ಕಳೆದ ಒಂದು ವಾರದ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್ ಠಾಣೆ ಎಎಸ್ಐ ಶಾಂತಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸೋಂಕಿತರು ಸಹ ಸಾವನ್ನಪ್ಪುತ್ತಿದ್ದಾರೆ. ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್ಐ ಶಾಂತಯ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕಳೆದ ವಾರದ ಹಿಂದೆಯಷ್ಟೇ ಕುಂಬಳಗೋಡು ಪೊಲೀಸ್ ಠಾಣೆಯ ಪಿಎಸ್ಐ ಕೂಡ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.