ETV Bharat / state

ಬಿಜೆಪಿಯವರು ಗಾಂಧಿ ಹಂತಕರ ವಂಶಸ್ಥರು: ಸಿಎಂ ಸಿದ್ದರಾಮಯ್ಯ

ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಪುಣ್ಯಾತ್ಮ ಮಹಾತ್ಮ ಗಾಂಧಿಯನ್ನು ಗುಂಡಿಟ್ಟು ಕೊಲ್ಲುವಂಥದ್ದೇನಿತ್ತು? ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದೇ ತಪ್ಪಾಯ್ತಾ? ಬ್ರಿಟಿಷರನ್ನು ವಿರೋಧಿಸಿದರು ಎನ್ನುವ ಕಾರಣಕ್ಕೆ ಗಾಂಧಿಯನ್ನು ಕೊಂದರಾ?- ಮುಖ್ಯಮಂತ್ರಿ ಸಿದ್ದರಾಮಯ್ಯ

Congress rally at Ramnagar
'ಭಾರತ್ ಜೋಡೋ ಯಾತ್ರೆ' ಕಾರ್ಯಕ್ರಮ
author img

By ETV Bharat Karnataka Team

Published : Sep 8, 2023, 9:18 AM IST

ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ 'ಭಾರತ್ ಜೋಡೋ ಯಾತ್ರೆ' ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯರ ಭಾವನೆ ಕೆರಳಿಸಿ, ಭಾರತೀಯ ಸಮಾಜ ವಿಭಜಿಸಿ, ಭಾರತೀಯರ ಹೃದಯಗಳನ್ನು ಒಡೆಯುವ ಮೂಲಕ ಎಷ್ಟಾಗುತ್ತೋ ಅಷ್ಟು ಮತ ಗಿಟ್ಟಿಸಲು ಯತ್ನಿಸುತ್ತಿದ್ದಾರೆ. ಭಾರತೀಯರನ್ನು ವಿಭಜಿಸಿ, ಹಿಂಸಿಸಿ ಮತ ಗಳಿಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ದುಡಿಯುವ ವರ್ಗಗಳು, ಶ್ರಮಿಕರು ಆತಂಕ ಹಾಗೂ ಅಭದ್ರತೆಯಲ್ಲಿ ಬದುಕುವಂತಹ ಹೀನಾಯ ಸ್ಥಿತಿಗೆ ದೇಶವನ್ನು ದೂಡಿದರು. ಭಾರತ ಕಟ್ಟಿದ ಸಮುದಾಯಗಳನ್ನು ಛಿದ್ರಗೊಳಿಸುವುದನ್ನು ವಿರೋಧಿಸಿ, ಬೆವರಿನ ಸಂಸ್ಕೃತಿಯ ಎಲ್ಲರನ್ನೂ ಒಟ್ಟುಗೂಡಿಸುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ 'ಭಾರತ್ ಜೋಡೋ ಯಾತ್ರೆ' ನಡೆಯಿತು ಎಂದರು.

ರಾಮನಗರಕ್ಕೆ ವಿಶೇಷ ಅನುದಾನ: ರಾಮನಗರ ಜಿಲ್ಲೆಯ ಇವತ್ತಿನ ದುಸ್ಥಿತಿಗೆ ಯಾರು ಕಾರಣ?. ಇಷ್ಟು ವರ್ಷ ರಾಮನಗರ ಜಿಲ್ಲೆ ಯಾರ ಹಿಡಿತದಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರನ್ನು ಪ್ರಶ್ನಿಸಿದರು. ಅದಕ್ಕೆ ಸಾರ್ವಜನಿಕರು ಜೆಡಿಎಸ್ ಎಂದು ಕೂಗಿದರು. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗುತ್ತಾರೆ. ಸಂಸದ ಡಿ.ಕೆ.ಸುರೇಶ್ ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್‌ರನ್ನು ಸೋಲಿಸಲಾಗದು. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವ ಜವಾಬ್ದಾರಿ ನಮ್ಮ ಸರ್ಕಾರದ್ದು. ನಾವು ಮಾಡಿ ತೋರಿಸ್ತೀವಿ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಸಿಎಂ ಭರವಸೆ ಕೊಟ್ಟರು.

ಹಿಂದಿನ ಸರ್ಕಾರದ ಸಚಿವ ಅಶ್ವತ್ಥ ನಾರಾಯಣ ಜಿಲ್ಲೆಗೆ ಏಕೆ ಮೆಡಿಕಲ್ ಕಾಲೇಜು ಕೊಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜಿಲ್ಲೆಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಗೊಂಡು ಹೋಗಿದ್ದು ಮಾಜಿ ಸಚಿವ ಡಾ.ಸುಧಾಕರ್. ಇಬ್ಬರೂ ಬಿಜೆಪಿಯವರೇ. ಜಿಲ್ಲೆಗೆ ಅನ್ಯಾಯ ಆಗಿದ್ದು ಇದೇ ಬಿಜೆಪಿಯವರಿಂದ. ಇವರ ಜತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಇಬ್ಬರಿಗೂ ನೈತಿಕತೆ ಇಲ್ಲ. ರಾಮನಗರ ಹಾಗೂ ಕನಕಪುರದಲ್ಲಿ ಎರಡೂ ಕಡೆ ಮೆಡಿಕಲ್ ಕಾಲೇಜು ಬೇಕು ಎಂದರೆ ಎರಡೂ ಕಡೆ ಮಾಡಲು ನಾವು ಸಿದ್ದವಿದ್ದೇವೆ ಎಂದರು.

ದೇಶದಲ್ಲಿ ಬದಲಾವಣೆ ಕಾಣುತ್ತಿದ್ದೇವೆ: 'ಭಾರತ ಜೋಡೊ ಪಾದಯಾತ್ರೆ'ಯ ಶ್ರಮ ಕರ್ನಾಟಕದಲ್ಲಿ ಫಲ ನೀಡಿತು. ಸುಮಾರು 500 ಕಿ.ಮೀ ಯಾತ್ರೆ ಕರ್ನಾಟಕದಲ್ಲಿ ಸಾಗಿದ ಪರಿಣಾಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಸಮಗ್ರತೆ,‌ ಐಕ್ಯತೆ, ಶಾಂತಿ ಕಾಪಾಡಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಪಾದಯಾತ್ರೆ ಮಾಡಿದ ಪರಿಣಾಮ ಇಂದು ನಾವು ದೇಶದಲ್ಲಿ ಬದಲಾವಣೆ ಕಾಣುತ್ತಿದ್ದೇವೆ ಎಂದರು.

ಸಂಸದ ಡಿ.ಕೆ.ಸುರೇಶ್, ಸಚಿವ ಮಂಕಾಳ ವೈದ್ಯ ಸೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಬಾಲಕೃಷ್ಣ, ಇಕ್ಬಾಲ್ ಹುಸೇನ್ ಹಾಗೂ ಪಕ್ಷದ ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ರಾಮನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಡ್ ಶೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.