ರಾಮನಗರ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಅಶ್ವತ್ಥ್ ನಾರಾಯಣ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಇರುವ ವೇದಿಕೆಯಲ್ಲಿ ಡಿ.ಕೆ.ಸುರೇಶ್ ವಿರುದ್ಧ ಏಕವಚನದಲ್ಲಿ ಮಾತನಾಡಿದ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕಿಡಿಕಾರಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿದರು.
ಏನಿದು ಘಟನೆ?
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲೇ ಸಚಿವ ಅಶ್ಚತ್ಥ್‌ನಾರಾಯಣ, ಡಿ.ಕೆ.ಸುರೇಶ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಬಳಿಕ ವೇದಿಕೆಯಲ್ಲಿ ಡಿ.ಕೆ.ಸುರೇಶ್ ಬೆಂಬಲಿಗರು ಮುಖ್ಯಮಂತ್ರಿ ಎದುರೇ ''ಡಿ.ಕೆ,ಡಿ.ಕೆ'' ಅಂತ ಘೋಷಣೆ ಕೂಗಿದ್ದಲ್ಲದೇ ಸಚಿವ ಅಶ್ವತ್ಥ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದರು.
ಇದನ್ನೂ ಓದಿ: ಸಚಿವ ಅಶ್ವತ್ಥನಾರಾಯಣ ಭಾಷಣಕ್ಕೆ ಡಿ.ಕೆ.ಸುರೇಶ್, ಬೆಂಬಲಿಗರ ಅಡ್ಡಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಪ್ರಹಾರ
ಇದಾದ ಬಳಿಕ ವೇದಿಕೆ ಮೇಲೆಯೇ ಸಚಿವ ಅಶ್ವತ್ಥ್‌ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ಕೈ-ಕೈ ಮಿಲಾಯಿಸಿರುವ ಪ್ರಸಂಗ ನಡೆಯಿತು.