ಬೆಂಗಳೂರು: ದೆಹಲಿಯ ಹೈಕೋರ್ಟ್ನಲ್ಲಿ ಡಿ.ಕೆ ಶಿವಕುಮಾರ್ಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದ ಡಿಕೆಶಿ ನಿವಾಸದ ಬಳಿ ಹಾಗೂ ರಾಮನಗರ ಮತ್ತು ಕುಣಿಗಲ್ನಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಮಧ್ಯಾಹ್ನ ಹೈಕೋರ್ಟ್ನಿಂದ ಜಾಮೀನು ಸಿಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ಬೆಂಬಲಿಗರು ಸಿಹಿ ಹಂಚಿ ಡಿಕೆಶಿ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದರು. ಇದೇ ವೇಳೆ ಡಿ.ಕೆ ಶಿವಕುಮಾರ್ ಬೆಂಬಲಿಗರಾದ ಸಂದೀಪ್ ಗೌಡ ಈಟಿವಿ ಭಾರತದೊಂದಿಗೆ ಮಾತನಾಡಿ ಡಿ.ಕೆ ಶಿವಕುಮಾರ್ ಘರ್ಜನೆ ಇನ್ನು ರಾಜ್ಯದಲ್ಲಿ ಜೋರಾಗಿ ಕೇಳಲಿದ್ದು, ಮುಂದಿನ ಮುಖ್ಯಮಂತ್ರಿ ಇವರೇ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಣಿಗಲ್ ಹಾಗೂ ರಾಮನಗರದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಸಂಬಂಧಿಯಾಗಿರುವ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರನ್ನು ಬುಜದ ಮೇಲೆ ಹೊತ್ತುಕೊಂಡು ಕುಣಿದಾಡಿದ್ದಾರೆ.