ETV Bharat / state

ಹೆಚ್ಚುತ್ತಿರುವ ಕೊರೊನಾ ಪ್ರಕರಣ..ನಿಷೇಧಾಜ್ಞೆ ಜಾರಿಗೊಳಿಸಿದ ರಾಮನಗರ ಡಿಸಿ! - ರಾಮನಗರ ಡಿಸಿ ರಾಕೇಶ್​ ಕುಮಾರ್​,

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆ ಮುಂದಿನ ಆದೇಶದವರೆಗೆ ರಾಮನಗರ ಡಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Corona increase, Corona increase in Ramanagar, CRPC 144 section issued, CRPC 144 section issued by DC Rakesh Kumar, Ramanagar DC Rakesh kumar, Ramanagar DC Rakesh kumar news, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ರಾಮನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ಸಿಆರ್​ಪಿಸಿ 144 ಸೆಕ್ಷನ್​ ಜಾರಿ, ಸಿಆರ್​ಪಿಸಿ 144 ಸೆಕ್ಷನ್​ ಜಾರಿಗೊಳಿಸಿದ ಡಿಸಿ ರಾಕೇಶ್​ ಕುಮಾರ್​, ರಾಮನಗರ ಡಿಸಿ ರಾಕೇಶ್​ ಕುಮಾರ್​, ರಾಮನಗರ ಡಿಸಿ ರಾಕೇಶ್​ ಕುಮಾರ್​ ಸುದ್ದಿ,
ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೂಳಿಸಿ ರಾಮನಗರ ಡಿಸಿ
author img

By

Published : Mar 30, 2021, 7:50 AM IST

Updated : Mar 30, 2021, 9:11 AM IST

ರಾಮನಗರ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ತಕ್ಷಣದಿಂದ ನಿಷೇಧಾಜ್ಞೆ ಜಾರಿಗೆ ಬರುವಂತೆ ರಾಮನಗರ ಡಿಸಿ ಆದೇಶಿಸಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿಆರ್​ಪಿಸಿ ಸೆಕ್ಷನ್ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆ ಹಾಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ರಾಮನಗರದಲ್ಲಿ ನಿಷೇಧಾಜ್ಞೆ ಮುಂದುವರಿದಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿ, ಷಬ್-ಎ-ಬರತ್, ಗುಡ್‌ಫ್ರೈಡೇ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಮೈದಾನ, ಉದ್ಯಾನಗಳು, ಮಾರುಕಟ್ಟೆಗಳಲ್ಲಿ, ಧಾರ್ಮಿಕ ಸ್ಥಳಗಳು ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸಭೆ - ಸಮಾರಂಭಗಳನ್ನು ಆಚರಿಸುವುದನ್ನು ಮತ್ತು ಆಯೋಜಿಸುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ನಿಷೇಧಿಸಿದೆ. ಎಲ್ಲ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಮೂಹಿಕವಾಗಿ ಗುಂಪು ಸೇರದೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೇಂದ್ರ ಹಾಗೂ ರಾಜ್ಯ ಮತ್ತು ಜಿಲ್ಲಾಡಳಿತದಿಂದ ಕೋವಿಡ್ ತಡೆಗಟ್ಟುವ ಸಂಬಂಧ ಹೊರಡಿಸಿರುವ ನಿಯಮ ಮತ್ತು ನಿಬಂಧನೆಗೆ ಒಳಪಟ್ಟು ಸಾಂಕೇತಿಕವಾಗಿ ಆಚರಣೆ ಮಾಡಲು ಡಿಸಿ ಸೂಚಿಸಿದ್ದಾರೆ.

ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಉಲ್ಲಂಘಿಸಿದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ನಿರ್ದೇಶಿಸಿದ್ದಾರೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188ರ ರೀತಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

Last Updated : Mar 30, 2021, 9:11 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.