ETV Bharat / state

ಸಂಬಂಧಿಗಳು ಸೋಂಕಿತರ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಿ: ತುಷಾರ್ ಗಿರಿನಾಥ್ - corona

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬರದಿರುವಂತೆ ನೋಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ರಾಮನಗರ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tushar Girinath
ತುಷಾರ್ ಗಿರಿನಾಥ್
author img

By

Published : May 20, 2021, 10:03 PM IST

ರಾಮನಗರ: ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾದ ನಂತರ ಸಂಬಂಧಿಕರು ಯಾವುದೇ ಕಾರಣಕ್ಕೂ ಆಸ್ಪತ್ರೆಯ ವಾರ್ಡ್​ಗೆ ಸೋಂಕಿತರನ್ನು ನೋಡಲು ಬರಬಾರದು. ಇದಕ್ಕೆ ಸೂಕ್ತ ಬಂದೋಬಸ್ತ್ ಮಾಡುವಂತೆ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಉತ್ತಮ ಆಹಾರ, ಆಕ್ಸಿಜನ್ ಅವಶ್ಯಕತೆ ಇರುವವರಿಗೆ ಆಕ್ಸಿಜನ್ ಹಾಗೂ ಔಷಧ ಒದಗಿಸಿ. ಸೋಂಕಿತರ ಸಂಬಂಧಿಕರು ಸೋಂಕಿತರ ಸಂಪರ್ಕಕ್ಕೆ ಬಂದರೆ ಸೋಂಕು ಹರಡುತ್ತದೆ. ಈ ಹಿನ್ನೆಲೆ ಪ್ರತಿ ಆಸ್ಪತ್ರೆಗೂ ಹಾಗೂ ಕೋವಿಡ್ ಕೇರ್ ಸೆಂಟರ್‌ಗೆ ಅಗತ್ಯ ಪೊಲೀಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಐಎಲ್ಐ ಎಸ್ಎಆರ್​ಐ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾವಹಿಸಿ ಹೋಮ್ ಐನೋಲೇಷನ್​ನಲ್ಲಿರುವ ಸೋಂಕಿತರ ಆರೋಗ್ಯ ತಪಾಸಣೆ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೇಕಿರುವ ಸೌಲಭ್ಯಗಳನ್ನು ಒದಗಿಸಿ ಚಿಕಿತ್ಸೆಗೆ ಬೇಕಿರುವ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಿ. ಲಾಕ್‌ಡೌನ್ ತೆರವುಗೊಳಿಸಿದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ದೊಡ್ಡಸವಾಲು. ಇದಕ್ಕೆ ಮೊದಲೇ ಯೋಜನೆ ರೂಪಿಸಿಕೊಂಡು ಸಿದ್ಧತೆ ಮಾಡಿಕೊಳ್ಳಿ ಎಂದರು.

ಓದಿ:ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ರಕ್ಷಿಸಿದ ಯೋಧರು: ಸೈನಿಕರ ಶೌರ್ಯಕ್ಕೆ ಜನರ ಸಲಾಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.