ರಾಮನಗರ : ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಇಂದು 10 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 225 ಕ್ಕೆ ಏರಿಕೆಯಾಗಿದೆ.
ಇಂದು ಮಾಗಡಿ ತಾಲ್ಲೂಕಿನಲ್ಲಿ 4, ರಾಮನಗರ ತಾಲ್ಲೂಕಿನಲ್ಲಿ 2, ಕನಕಪುರ ತಾಲೂಕಿನಲ್ಲಿ 2 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 2 ಪ್ರಕರಣಗಳು ಕಂಡುಬಂದಿರುತ್ತದೆ. ಇವರನ್ನು ಚಿಕಿತ್ಸೆಗಾಗಿ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಳು ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 87 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.