ರಾಮನಗರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಾಲಗೇರಿ ಬಡಾವಣೆಯಲ್ಲಿ ಶನಿವಾರ ನಡೆದಿದೆ. ಕಿರಣ್ (29) ಹಾಗೂ ಗಾಯತ್ರಿ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತ ಕಿರಣ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷಗಳ ಹಿಂದೆ ಇವರು ವಿವಾಹವಾಗಿದ್ದರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕಳೆದ ಒಂದು ವರ್ಷದ ಹಿಂದೆ ದಂಪತಿಯ ಮಗು ತೊಟ್ಟಿಗೆ ಬಿದ್ದು ಮೃತಪಟ್ಟಿತ್ತು. ಇಂದು ಬೆಳಗ್ಗೆ ಬಹಳ ಹೊತ್ತಾದರೂ ಮನೆಯಿಂದ ದಂಪತಿ ಹೊರಬಾರದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ.
![couple-suicide-in-ramanagara](https://etvbharatimages.akamaized.net/etvbharat/prod-images/16032884_thews.jpg)
ರಾಮನಗರ ಟೌನ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹ: ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ, ಕಂದಮ್ಮಗಳು ಸಾವು