ರಾಮನಗರ: ಇಂದು ಇಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೋರ್ಟ್ ಆವರಣದಲ್ಲಿ 36 ವರ್ಷದ ಅಟೆಂಡರ್ ಕುಳಿತ ಭಂಗಿಯಲ್ಲೇ ಮೃತಪಟ್ಟಿದ್ದರೆ, ಮತ್ತೊಂದೆಡೆ ಜಿಲ್ಲೆಯ ಮಾಗಡಿ ತಾಲೂಕಿನ ಮಾಡಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರತಿಕ್ರಿಯೆ ನಡೆಸುತ್ತಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಮನಗರ ಪಟ್ಟಣದ ಜಿಲ್ಲಾ ಮತ್ತು ಸತ್ರ ನ್ಯಾಯಲಯದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಮಧು, ಕೋರ್ಟ್ ಆವರಣದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೂದನಗುಪ್ಪೆ ಗ್ರಾಮದ ನಿವಾಸಿ 36 ವರ್ಷದ ಮಧು ಚೇರ್ನಲ್ಲಿ ಕುಳಿತಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ರಾಮನಗರದ ಐಜೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಹೃದಯಾಘಾತದಿಂದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಸಾವು: ಜಿಲ್ಲೆಯ ಮಾಗಡಿ ತಾಲೂಕಿನ ಮಾಡಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಬುಗೌಡ(54) ಸಾವನ್ನಪ್ಪಿದ್ದಾರೆ. 2 ದಿನದ ಹಿಂದೆ ಮಾಡಬಾಳು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ರಾಮಮೂರ್ತಿಯವರ ಪತ್ನಿ ಕಮಲಮ್ಮನವರನ್ನು ಸಾಂಸ್ಕೃತಿಕ ರೂವಾರಿಯಾಗಿ ನೇಮಿಸಬೇಕು: ಮುಖ್ಯಮಂತ್ರಿ ಚಂದ್ರು