ರಾಮನಗರ: ಚನ್ನಪಟ್ಟಣದ ಜನತೆ ಅಭಿವೃದ್ದಿಯ ಕಡೆಗೆ ಹೆಚ್ಚು ಒಲವು ತೋರುತ್ತಾರೆ. ಹಾಗಾಗಿ ಈ ಬಾರಿ ಬಿಜೆಪಿಗೆ ಈ ಕ್ಷೇತ್ರದ ಜನ ಬೆಂಬಲ ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಪಿ. ಯೋಗೀಶ್ವರ್ ಅಭಿಪ್ರಾಯಪಟ್ಟರು.
ಚನ್ನಪಟ್ಟಣದ ಅವರ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ವಿಶ್ವಾಸವಿದೆ ಎಂದರು.
ಬಳಿಕ ಅಭ್ಯರ್ಥಿ ಅಶ್ವಥ್ ನಾರಾಯಣ್ ಮಾತನಾಡಿ, ನಮ್ಮ ಪಕ್ಷದ ಒಳ್ಳೆಯ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ನವರು ಏನೂ ಬೇಕಾದರೂ ಹೇಳಿಕೊಳ್ಳಲಿ. ಆದ್ರೆ ಜೆಡಿಎಸ್ ಸ್ವಾಭಿಮಾನಿ ಮತದಾರರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ ಎಂದರು.