ರಾಮನಗರ: ಆಸ್ತಿ ವಿಚಾರವಾಗಿ ತಾಯಿಯನ್ನು ಕೊಂದು ಮನೆ ಹಿಂದಿನ ಹೊಂಡದಲ್ಲಿ ಹೂತು ಹಾಕಿದ್ದ ಮಗನಿಗೆ ರಾಮನಗರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂಪಾಯಿ ದಂಡ ವಿಧಿಸಿದೆ. ಚನ್ನಪಟ್ಟಣ ತಾಲೂಕಿನ ಎಂ. ಕೆ. ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಾರ ಗ್ರಾಮದ ಸುರೇಶ್ ಶಿಕ್ಷೆಗೆ ಒಳಗಾದವರು. ನಾಗಮ್ಮ (70) ತನ್ನ ಮಗನಿಂದಲೇ ಕೊಲೆಯಾದ ವೃದ್ಧೆ. ತನ್ನ ತಾಯಿ ಹೆಸರಲ್ಲಿ ಇದ್ದ ಜಮೀನನ್ನು ತನಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ ಸುರೇಶ್, ತನ್ನ ತಾಯಿಯನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಮನೆ ಹಿಂದಿನ ಹೊಂಡದಲ್ಲಿ ಶವವನ್ನು ಹೂತು ಹಾಕಿದ್ದ.
ಈ ಸಂಬಂಧ ಕೊಲೆಯಾದ ನಾಗಮ್ಮ ಪುತ್ರಿ ಲಕ್ಷ್ಮೀ ಎಂ. ಕೆ. ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿ, ತನ್ನ ಅಣ್ಣ ಸುರೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣ ದಾಖಲು ಮಾಡಿಕೊಂಡಿದ್ದ ಸಿಪಿಐ ಎ. ಪಿ. ಕುಮಾರ್, ಎಸ್ಐ ಶಿವಕುಮಾರ್ ನೇತೃತ್ವದ ತಂಡ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದರು. ಈ ಸಂಬಂಧ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿ ತಮ್ಮಣ್ಣ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ರಾಮನಗರ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ದೇವರಾಜ್ ಭಟ್ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ ದಂಡ ವಿಧಿಸಿದ್ದಾರೆ.
ಪತ್ನಿಕೊಂದ ಪತಿಗೆ ಜೀವಾವಧಿ ಶಿಕ್ಷೆ : ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಹೆಂಡತಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಕಳೆದ ವಾರ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 19/02/20ರಂದು ದಾವಣಗೆರೆಯ ಅಮರಾವತಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪಗೆ ಶಿಕ್ಷೆ ವಿಧಿಸಲಾಗಿತ್ತು. ಮರಿಯಪ್ಪ ತನ್ನ ಹೆಂಡತಿ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಜಗಳ ಮಾಡಿದ್ದ.
ಬಳಿಕ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಮನೆಯಲ್ಲಿದ್ದ ಚಾಕುವಿನಿಂದ ತನ್ನ ಕೊಲೆ ಮಾಡಿದ್ದ. ಈ ಕೊಲೆ ಪ್ರಕರಣವನ್ನು ಹರಿಹರ ಸಿಪಿಐ ಸತೀಶ ಕುಮಾರ್ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ದಾವಣಗೆರೆ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ವಿ ವಿಜಯನಂದರವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ 11,000 ಸಾವಿರ ದಂಡ ವಿಧಿಸಿದ್ದರು.
ಇದನ್ನೂ ಓದಿ : Mangaluru Rape and murder Case: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್