ರಾಮನಗರ: ಮೇ 23ರಂದು ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗಾಗಿ ನಡೆಯುತ್ತಿರುವ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ಖುದ್ದು ವೀಕ್ಷಿಸಿದರು.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಭೇಟಿ ನೀಡಿ, ಮತ ಯಂತ್ರಗಳನ್ನುಇರಿಸಿದ್ದ ಸ್ಟ್ರಾಂಗ್ರೂಂ ಮತ್ತು ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.
ಮತ ಎಣಿಕೆ ದಿನದಂದು ಕ್ಷೇತ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲಾಗುವುದು. ಅದಕ್ಕಾಗಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕಾ ಕೇಂದ್ರಕ್ಕೆ ಮೊಬೈಲ್‌ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಪೋಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೊತ್ ಹಾಜರಿದ್ದರು.