ETV Bharat / state

ಕೋವಿಡ್​​ ಪರಿಸ್ಥಿತಿಯನ್ನು ರಾಮನಗರ ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಿಸಿದೆ: ಡಿಸಿಎಂ ಪ್ರಶಂಸೆ

ರಾಮನಗರ ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಇಂದು ಡಿಸಿಎಂ ಅಶ್ವತ್ಥ್ ನಾರಾಯಣ ಸಭೆ ನಡೆಸಿದರು. ಜಿಲ್ಲೆಯಲ್ಲಿನ ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಾಕಷ್ಟು ತಯಾರಿ ಮಾಡಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

DCM ashwat narayan
ಅಶ್ವತ್ಥ್​​ ನಾರಾಯಣ ಪ್ರಶಂಸೆ
author img

By

Published : Jun 28, 2020, 6:53 PM IST

ರಾಮನಗರ: ಕೋವಿಡ್-19 ಸೋಂಕಿನ ನಿರ್ವಹಣೆಯನ್ನು ಜಿಲ್ಲಾಡಳಿತ ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್​​ ನಾರಾಯಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲೆಯಲ್ಲಿನ ಕೊರೊನಾ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಆದರೂ ಮುಂದಿನ ದಿನಗಳನ್ನು ಗಮನದಲ್ಲಿಟ್ಟುಕೊಂಡು ಇನ್ನೂ ಅನೇಕ ರೀತಿಯ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿಗಳು ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ರಾಮನಗರ ಜಿಲ್ಲಾಡಳಿತಕ್ಕೆ ಡಿಸಿಎಂ ಅಶ್ವತ್ಥ್​​ ನಾರಾಯಣ ಪ್ರಶಂಸೆ

ಆಸ್ಪತ್ರೆಗಳೊಂದಿಗೆ ಒಪ್ಪಂದ:

ಜಿಲ್ಲೆಯ ಕೋವಿಡ್​​ ರೋಗಿಗಳು ಚಿಕಿತ್ಸೆಗಾಗಿ ಬೆಂಗಳೂರಿನ ಕೆಂಗೇರಿ ಸಮೀಪದಲ್ಲಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಕನಕಪುರದ ಹಾರೋಹಳ್ಳಿ ಸಮೀಪದ ದಯಾನಂದ್ ಸಾಗರ್ ಆಸ್ಪತ್ರೆಗಳೊಂದಿಗೆ ಜಿಲ್ಲಾಡಳಿತವು ಒಪ್ಪಂದ ಮಾಡಿಕೊಳ್ಳುತ್ತಿದೆ. ಒಪ್ಪಂದದಂತೆ ಮುಂದಿನ 10, 20 ಮತ್ತು 30 ದಿನಗಳಿಗೆ ಅಗತ್ಯವಾಗುವ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳುವಂತೆ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಹಾಯ ಕೇಂದ್ರ:

ಎರಡು ಆಸ್ಪತ್ರೆಗಳ ಪ್ರಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸಹಾಯಕೇಂದ್ರವನ್ನು ಪ್ರಾರಂಭಿಸಲಾಗುವುದು. ಈ ಸಹಾಯವಾಣಿ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಿರುವ ಮಾಹಿತಿಯನ್ನು ನೀಡಲಾಗುವುದು. ಆಸ್ಪತ್ರೆಗಳಲ್ಲಿ ದಾಖಲಾಗುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಕ್ಲಿನಿಕ್ ಸಂಖ್ಯೆ ಹೆಚ್ಚಳ:

ಜಿಲ್ಲೆಯಲ್ಲಿ 9 ಫೀವರ್ ಕ್ಲಿನಿಕ್​ಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಸಂಖ್ಯೆಯನ್ನು 23 ಕ್ಕೆ ಹೆಚ್ಚಿಸಲಾಗುವುದು. ಹಾಗೆಯೇ, ಈಗಿರುವ 4 ಸ್ವಾಬ್ ಸಂಗ್ರಹ ಘಟಕಗಳ ಸಂಖ್ಯೆಯನ್ನು 16 ಕ್ಕೆ ಏರಿಸಲಾಗುವುದು ಎಂದು ತಿಳಿಸಿದರು.

ಖಾಸಗಿ ವೈದ್ಯರಿಗೂ ಪಿಪಿಇ ಕಿಟ್ :

ಜಿಲ್ಲೆಯಲ್ಲಿ ಖಾಸಗಿಯಾಗಿ ರೋಗಿಗಳನ್ನು ಪರೀಕ್ಷಿಸುತ್ತಿರುವ ಎಲ್ಲಾ ವೈದ್ಯರಿಗೂ ಮುಂಜಾಗ್ರತಾ ಕ್ರಮವಾಗಿ ಪಿಪಿಇ ಕಿಟ್ ಧರಿಸುವುದನ್ನು ಕಡ್ಡಾಯ ಮಾಡಲು ಚಿಂತಿಸಲಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಪೂರ್ಣಪ್ರಮಾಣದ ಇಲ್ಲವೇ ಹಾಫ್ ಪಿಪಿಇ ಕಿಟ್ ಧರಿಸಿಕೊಂಡು ರೋಗಿಗಳನ್ನು ಪರೀಕ್ಷಿಸಬೇಕು ಎಂದು ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.