ETV Bharat / state

ರಾಜ್ಯದಲ್ಲೇ ಮೊದಲು: ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್ ICU ಲೋಕಾರ್ಪಣೆ

author img

By

Published : May 28, 2021, 8:00 AM IST

ಮಾಗಡಿ ಆಸ್ಪತ್ರೆಯಲ್ಲಿ ಈಗಾಗಲೇ 100 ಹಾಸಿಗೆಗಳಿದ್ದು, ಈ ಪೈಕಿ 50 ಬೆಡ್‌ಗಳಿಗೆ ಆಕ್ಸಿಜನ್‌ ಸೌಲಭ್ಯವಿದೆ. ಇನ್ನು ಕೆಲ ದಿನಗಳಲ್ಲಿಯೇ ಉಳಿದ 50 ಹಾಸಿಗೆಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಹೇಳಿದರು.

Ramnagar
ರಾಮನಗರ

ರಾಮನಗರ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ತಾಲೂಕು ಆಸ್ಪತ್ರೆಯೊಂದರ ಆವರಣದಲ್ಲಿ ಸ್ಥಾಪಿಸಲಾಗಿರುವ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಅನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಲೋಕಾರ್ಪಣೆ ಮಾಡಿದರು.

ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಲೋಕಾರ್ಪಣೆ..

ಕೋವಿಡ್‌ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುಕೂಲವಾಗುವ ಈ ಮಾಡ್ಯೂಲರ್‌ ಐಸಿಯು ಅನ್ನು ಆ್ಯಕ್ಟ್ ಗ್ರಾಂಟ್ ಮತ್ತು 'ರೆನಾಕ್‌' ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಈ ರೀತಿಯ ಐಸಿಯುಗಳನ್ನು ಈಗಾಗಲೇ ಬೆಂಗಳೂರಿನ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಬಳಕೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥ ನಾರಾಯಣ ಅವರು, "ಎಸಿಟಿ (ಆಕ್ಷನ್‌ ಕೋವಿಡ್‌ ಟೀಂ) ಗ್ರಾಂಟ್ಸ್ ಈ ಮಾಡ್ಯೂಲರ್‌ ಐಸಿಯು ಅನ್ನು ಮಾಗಡಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ಅದಕ್ಕೆ ಅಗತ್ಯವಾದ ಮಾನಿಟರ್‌ಗಳನ್ನು ಬಿಡದಿಯ ಟೊಯೊಟ ಕಿರ್ಲೋಸ್ಕರ್‌ ಕಂಪನಿ ನೀಡಿದ್ದು, ವೆಂಟಿಲೇಟರ್‌ಗಳು ಪಿ.ಎಂ ಕೇರ್‌ನಿಂದ ಬಂದಿವೆ. ಈ ಐಸಿಯುನಿಂದ ಹೊರಗಿನಿಂದ ಒಳ ಬರುವ ಅಥವಾ ಒಳಗಿನಿಂದ ಹೊರ ಬರುವ ಗಾಳಿಯು ಸಂಪೂರ್ಣವಾಗಿ ಶುದ್ಧೀಕರಣಗೊಳ್ಳುತ್ತದೆ. ಜತೆಗೆ, ಪ್ರತ್ಯೇಕ ಆಕ್ಸಿಜನ್‌ ಸಂಪರ್ಕದ ಜತೆಗೆ, ನೀರು ಹಾಗೂ ಒಳಚರಂಡಿ ಪ್ರತ್ಯೇಕ ಸಂಪರ್ಕ ಇರುತ್ತದೆ. ಇಡೀ ರಾಜ್ಯದಲ್ಲೇ ಇಂಥ ಆಧುನಿಕ ಐಸಿಯು ಅನ್ನು ಮಾಗಡಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ" ಎಂದರು.

ಇಲ್ಲಿಗೆ ಅಗತ್ಯವಾದ ಎಲ್ಲ ಔಷಧಿ, ಆಮ್ಲಜನಕ, ವೈದ್ಯಕೀಯ ಸರಂಜಾಮುಗಳು, ಸಿಬ್ಬಂದಿ ಕೊರತೆ ಇಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ನಾಲ್ವರಿಗೆ ಈ ಐಸಿಯುವನಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2 ತಿಂಗಳಲ್ಲಿ ಆಕ್ಸಿಜನ್‌ ಘಟಕ:

ಮಾಗಡಿ ಆಸ್ಪತ್ರೆಯಲ್ಲಿ ಈಗಾಗಲೇ 100 ಹಾಸಿಗೆಗಳಿದ್ದು, ಈ ಪೈಕಿ 50 ಬೆಡ್‌ಗಳಿಗೆ ಆಕ್ಸಿಜನ್‌ ಸೌಲಭ್ಯವಿದೆ. ಇನ್ನು ಕೆಲ ದಿನಗಳಲ್ಲಿಯೇ ಉಳಿದ 50 ಹಾಸಿಗೆಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಅಲ್ಲದೆ, ನಿಮಿಷಕ್ಕೆ 600 ಕೆಎಲ್‌ ಪೂರೈಕೆ ಸಾಮರ್ಥ್ಯದ ಆಮ್ಲಜನಕ ಉತ್ಪಾದಕ ಘಟಕವನ್ನೂ ಎರಡು ತಿಂಗಳಲ್ಲಿ ಸ್ಥಾಪನೆ ಮಾಡಲಾಗುವುದು.

ಜತೆಗೆ, ಒಟ್ಟು ಬೆಡ್‌ಗಳಲ್ಲಿ 25% ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡುವ ಉದ್ದೇಶವೂ ಇದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಘಟಕಗಳನ್ನು ಅಳವಡಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು. ಇದಲ್ಲದೆ, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸುಸಜ್ಜಿತ ಲ್ಯಾಬ್‌ ಹಾಗೂ ತುರ್ತು ಸಂದರ್ಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಮ್ಲಜನಕ ಸಾಂದ್ರಕಗಳನ್ನೂ ಒದಗಿಸಲಾಗುವುದು ಎಂದರು.

ತಕ್ಷಣವೇ ಸಿಬ್ಬಂದಿ ನೇಮಕ:

ಎಲ್ಲ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೂಡಲೇ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಮುಖ್ಯವಾಗಿ ಸೋಲೂರು ಮತ್ತು ತಿಪ್ಪಸಂದ್ರ ಸಮುದಾಯ ಆರೋಗ್ಯ ಕೇಂದ್ರಗಳಿಗೆ ತಕ್ಷಣವೇ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಳಿಕ ಉಪ ಮುಖ್ಯಮಂತ್ರಿಗಳು ಸಿದ್ಧಾರೂಢಮಠದ ಆಶ್ರಮದಲ್ಲಿ ಮುಂಚೂಣಿ ವಾರಿಯರ್ಸ್ ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡುತ್ತಿರುವುದನ್ನು ವೀಕ್ಷಿಸಿದರು. ನಂತರ ಹುಲಿಕೋಟೆಯ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿ ಅಲ್ಲಿ ನೇರವಾಗಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದರು. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಿ, ಆಹಾರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.

ಅಂತಿಮವಾಗಿ ವಿಜಿ ದೊಡ್ಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ಕೊರತೆ ಇರುವ ಸಿಬ್ಬಂದಿ ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಕೆಲ ದಿನಗಳಲ್ಲಿಯೇ ಇಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಅಳವಡಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.