ರಾಮನಗರ: ಸರ್ಕಾರ ಉರುಳೋದು ಕಾಂಗ್ರೆಸ್ನಲ್ಲಿ ಮಾತ್ರ, ಬಿಜೆಪಿಯಲ್ಲಿ ಅಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯತ್ಗಳಿಗೆ ವಿತರಿಸಲಾಗುವ ತ್ರಿಚಕ್ರ ವಾಹನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಂಸದ ಡಿ.ಕೆ.ಸುರೇಶ್ ಹೇಳಿದಂತೆ ರಾಜ್ಯದಲ್ಲಿ ಏನೂ ನಡೆಯಲ್ಲ. 5 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರಲಿದೆ. ಮುಂದೆಯೂ ಬಿಜೆಪಿಯೇ ಬರಲಿದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಯಡಿಯೂರಪ್ಪನವರು ಹಿರಿಯರು. ನಾವು ಅವರ ನಾಯಕತ್ವದಲ್ಲೇ ಮುಂದುವರೆಯುತ್ತೇವೆ ಎಂದರು.
ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಯಾರು ನಿಮಗೆ ಹೇಳಿದ್ದು ಬಿಜೆಪಿಯಲ್ಲಿ ಅಸಮಾಧಾನ ಇದೆ ಅಂತಾ? ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಗರಂ ಆದ್ರು. ಮೂರು ವರ್ಷ ಯಡಿಯೂರಪ್ಪನವರ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ. ಯಾರೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದರು.