ETV Bharat / state

ರಾಮ ಮಂದಿರ ನಿರ್ಮಾಣಕ್ಕೆ ಕೈ ಜೋಡಿಸಿದ ಜನ - DCM Dr DCN Ashwath Narayan conducts fund-raising campaign for Ram Mandir

ರಾಮ ಮಂದಿರ ನಿರ್ಮಾಣಕ್ಕಾಗಿ ರಾಮನಗರದಲ್ಲಿಂದು ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಾ. ಸಿ.ಎನ್.ಅಶ್ವತ್ಥ​ ನಾರಾಯಣ ಮನೆ ಮನೆಗೆ ತೆರಳಿ ನಿಧಿ ಸಂಗ್ರಹಿಸಿದರು.

c-n-ashwath-narayan
ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ್
author img

By

Published : Jan 26, 2021, 8:03 PM IST

ರಾಮನಗರ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರಕ್ಕಾಗಿ ನಗರದಲ್ಲಿಂದು ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಾ. ಸಿ.ಎನ್.ಅಶ್ವತ್ಥ​ ನಾರಾಯಣ ಪಾಲ್ಗೊಂಡರು.

ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ನಗರದ ವಿವಿಧ ಭಾಗಗಳಲ್ಲಿ ಡಿಸಿಎಂ ಸಂಚರಿಸಿದರು. ಈ ವೇಳೆ ಸಾರ್ವಜನಿಕರು ಶ್ರದ್ಧೆ-ಭಕ್ತಿಯಿಂದ ತಮ್ಮ ಕೈಲಾದ ಮಟ್ಟಿಗೆ ದೇಣಿಗೆಯನ್ನು ನೀಡಿದರು.

ಡಾ. ಸಿ.ಎನ್.ಅಶ್ವತ್ಥ​ ನಾರಾಯಣ ನಿಧಿ ಸಂಗ್ರಹಿಸುತ್ತಿರುವುದು

ಚಾಮುಂಡೇಶ್ವರಿ ಬಡಾವಣೆ, ಎಂ.ಜಿ.ರಸ್ತೆ, ನಗರಸಭೆ ಎದುರಿನ ಪ್ರದೇಶ, ಕೆಂಪೇಗೌಡ ವೃತ್ತ, ಪಂಚಮುಖಿ ಆಂಜನೇಯಸ್ವಾಮಿ ರಸ್ತೆ, ರೆಡ್ಡಿ ಸಾಮಿಲ್‌, ರಾಯರ ದೊಡ್ಡಿ ಪ್ರದೇಶಗಳಲ್ಲಿ ಸುಮಾರು 21ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿದ ಡಿಸಿಎಂ ಅವರಿಗೆ ಜನರು ಶ್ರೀರಾಮ ಮಂದಿರಕ್ಕೆ ದೇಣಿಗೆ ನೀಡಿದರು.

ತಮ್ಮ ಮನೆಗೆ ಬಂದ ಉಪ ಮುಖ್ಯಮಂತ್ರಿಯನ್ನು ಆದರದಿಂದ ಬರಮಾಡಿಕೊಂಡ ಜನರು, ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮುಖ್ಯವಾಗಿ ಹಿರಿಯ ನಾಗರಿಕರು, ಅದರಲ್ಲೂ ಮಹಿಳೆಯರು, ಅಯೋಧ್ಯೆಯಲ್ಲಿ ಮಂದಿರ ಸಾಕ್ಷಾತ್ಕಾರವಾಗುತ್ತಿರುವುದಕ್ಕೆ ಭಾವುಕರಾಗಿ ಪ್ರತಿಕ್ರಿಯಿಸಿದರು. ತಮ್ಮ ಉಳಿತಾಯದಲ್ಲಿದ್ದ ಹಣವನ್ನು ಡಿಸಿಎಂ ಅವರಿಗೆ ಹಸ್ತಾಂತರ ಮಾಡಿದರು.

ಪಾಕೆಟ್‌ ಮನಿ ಕೊಟ್ಟ ಚಿಣ್ಣರು: ವಿಶೇಷವೆಂದರೆ ಚಿಣ್ಣರು ಕೂಡ ಅಪ್ಪ-ಅಮ್ಮ ತಮ್ಮ ಖರ್ಚಿಗಾಗಿ ನೀಡಿದ್ದ ಹಣವನ್ನು ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿ ಸಾರ್ಥಕತೆ ಮೆರೆದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, "ರಾಮ ಮಂದಿರ ನಿರ್ಮಾಣಕ್ಕೆ ಹಣ ಕೊಡಿ ಎಂದು ಯಾರನ್ನು ಯಾರೂ ಕೇಳುತ್ತಿಲ್ಲ. ಆದರೆ ಜನರೇ ಸ್ವ-ಇಚ್ಛೆಯಿಂದ ಅಯೋಧ್ಯೆ ರಾಮನಿಗೆ ಮಂದಿರ ನಿರ್ಮಿಸಲು ಕೈಜೋಡಿಸುತ್ತಿದ್ದಾರೆ. ಅದರಲ್ಲೂ ಪುಟ್ಟ ಮಕ್ಕಳು ತಮ್ಮ ಖರ್ಚಿನ ಕಾಸನ್ನೂ ರಾಮನ ಸೇವೆಗೆ ಅರ್ಪಿಸಿದ್ದು, ನನ್ನ ಮನಸ್ಸು ಉಕ್ಕಿ ಬರುವಂತೆ ಮಾಡಿತು" ಎಂದರು.

ಓದಿ: ರಾಜಧಾನಿಯಲ್ಲಿ ಬೆನ್ಜ್ ಹಾಗೂ ದೊಡ್ಡ ಕಾರುಗಳೇ ಓಡಾಡಬೇಕಾ? : ಡಿಕೆಶಿ ಪ್ರಶ್ನೆ

ನಿಧಿ ಸಮರ್ಪಣಾ ಯಾತ್ರೆಯ ವೇಳೆ ಕೆಲ ಮನೆಗಳಲ್ಲಿ ರಾಮ ಪೂಜೆಯನ್ನು ಏರ್ಪಡಿಸಲಾಗಿತ್ತು. ಡಿಸಿಎಂ ಪೂಜೆಯಲ್ಲಿ ಭಾಗಿಯಾದರು. ಪಕ್ಷದ ಜಿಲ್ಲಾ ಮುಖಂಡರು, ಹಿರಿಯರು ಈ ಸಂದರ್ಭದಲ್ಲಿ ಡಿಸಿಎಂ ಜತೆಯಲ್ಲಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.