ETV Bharat / state

ರಾಮನಗರ: ವಿವಿಧ ನೀರಾವರಿ, ಕುಡಿವ ನೀರಿನ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ - DCM Ashwaththanarayana Meeting

ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಸಂಬಂಧ ಕರೆದಿದ್ದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ಅವರು ಮಾಹಿತಿ ಪಡೆದರು.

DCM meeting on irrigation, drinking water projects in Ramanagar
ರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರಿನ ಯೋಜನೆಗಳ ಕುರಿತು ಡಿಸಿಎಂ ಅಶ್ವತ್ಥನಾರಾಯಣ ಸಭೆ
author img

By

Published : Aug 27, 2020, 9:32 AM IST

ರಾಮನಗರ: ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರಿನ ಯೋಜನೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಸಂಬಂಧ ಕರೆದಿದ್ದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

ಶ್ರೀರಂಗ ಸೇರಿದಂತೆ ಹಲವು ಯೋಜನೆಗಳಿಗೆ ಭೂಸ್ವಾಧೀನದ ಸಮಸ್ಯೆ ಇದೆ. ಅದನ್ನು ತಕ್ಷಣ ಬಗೆಹರಿಸಲು ಸೂಚಿಸಿದ ಅವರು ಯಾವುದೇ ಕಾರಣಕ್ಕೂ ಕುಡಿಯುವ ಮತ್ತು ನೀರಾವರಿ ಯೋಜನೆಗಳು ವಿಳಂಬವಾಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧ ತುಮಕೂರು ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಜೊತೆ ಸಭೆಗಳನ್ನು ನಡೆಸುವಂತೆಯೂ ಅವರು ಆದೇಶಿಸಿದರು.

ಮಾಗಡಿ ತಾಲೂಕಿಗೆ ಕುಡಿಯುವ ನೀರು ಸರಬರಾಜು ಮಾಡುವ ಶ್ರೀರಂಗ ಯೋಜನೆಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಬೇಕು ಎನ್ನುವ ಕಟ್ಟಾಜ್ಞೆಯನ್ನೂ ಉಪ ಮುಖ್ಯಮಂತ್ರಿ ನೀಡಿದರು. ಇದಕ್ಕೆ ಮುಖ್ಯ ಇಂಜಿನಿಯರ್​‌ ಬಾಲಕೃಷ್ಣ ಒಪ್ಪಿಗೆ ಸೂಚಿಸಿದರು. ಭೂಸ್ವಾಧೀನ ಪ್ರಕ್ರಿಯೆಗೆ ಎದುರಾಗಿರುವ ತೊಡಕುಗಳ ಬಗ್ಗೆ ಇನ್ನೊಂದು ವಾರದಲ್ಲಿ ಕಂದಾಯ ಇಲಾಖೆ ಜೊತೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಸೂಚಿಸಿದರು.

ಅರ್ಕಾವತಿ ಜಲಾಶಯದ ಹಿನ್ನೀರಿನಿಂದ ಕನಕಪುರ ತಾಲೂಕಿನ ಗರಳಾಪುರ ಹಾಗೂ ಇನ್ನಿತರ 12 ಕೆರೆಗಳಿಗೆ ಎರಡು ಹಂತಗಳಲ್ಲಿ ನೀರು ತುಂಬಿಸಲು 70 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದು, ಇದಕ್ಕೂ ಭೂಸ್ವಾಧೀನದ ಸಮಸ್ಯೆ ಇದೆ. ತಕ್ಷಣ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ಡಿಸಿಎಂ ಸಭೆಗೆ ತಿಳಿಸಿದರು.

ಒಟ್ಟು 540 ಕೋಟಿ ವೆಚ್ಚದ ಸತ್ತೇಗಾಲ ಕುಡಿಯುವ ನೀರು ಯೋಜನೆ ಪ್ರಗತಿಯಲ್ಲಿದ್ದು, ಇದರಿಂದ ಮೊಗೇನಹಳ್ಳಿ ಕೆರೆ ಮತ್ತು ಕಣ್ವ ಜಲಾಶಯಕ್ಕೆ ನೀರನ್ನು ತುಂಬಿಸಲಾಗುತ್ತದೆ. ಪುನಃ ಅಲ್ಲಿಂದ ಮಂಚನಬೆಲೆ ಜಲಾಶಯ ಮತ್ತು ವೈ. ಜಿ. ಗುಡ್ಡ ಕೆರೆಗೆ ತಂದು ಅದನ್ನು ನಾಲ್ಕು ತಾಲೂಕುಗಳಿಗೂ ಕುಡಿಯುವ ನೀರನ್ನು ಒದಗಿಸಲಾಗುತ್ತದೆ. ಸದ್ಯದಲ್ಲೇ ಈ ಯೋಜನೆಯ ಪ್ರಗತಿಯನ್ನು ಖುದ್ದು ಪರಿಶೀಲಿಸಲಾಗುವುದು. ನೀರು ಸರಬರಾಜಿಗೆ ಸುರಂಗ ನಿರ್ಮಾಣ ಮಾಡುತ್ತಿದ್ದು, ಅದರ ಬಗ್ಗೆಯೂ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರು.

ಗರಕಹಳ್ಳಿ ಏತ ಯೋಜನೆ, ಸಾತನೂರು ಕೆರೆ ತುಂಬಿಸುವ ಯೋಜನೆ, ನಾರಾಯಪುರ ಕೆರೆ ತುಂಬಿಸುವ ಯೋಜನೆ, ಕೆಂಗೇರಿ ದೊಡ್ಡಬೆಲೆ ಏತ ಯೋಜನೆ, ಬೈರಮಂಗಲ ತಿರುವು ನಾಲಾ ಯೋಜನೆ, ಕಣ್ವ ನಾಲೆಗಳ ಆಧುನೀಕರಣ ಯೋಜನೆ, ಅರೆಕೊಪ್ಪ ಸೂಕ್ಷ್ಮ ನೀರಾವರಿ, ಹೆಗ್ಗನೂರು ಸೂಕ್ಷ್ಮ ನೀರಾವರಿ, ದೊಡ್ಡಾಲಹಳ್ಳಿ ಹನಿ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆಯೂ ಉಪ ಮುಖ್ಯಮಂತ್ರಿ ಅವರು ನೀರಾವರಿ ನಿಗಮದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.