ETV Bharat / state

ರಾಮನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ ಡಿಸಿ ಎಂ.ಎಸ್. ಅರ್ಚನಾ - Ramanagara

ನಿಷೇಧಾಜ್ಞೆಯ ಅವಧಿಯಲ್ಲಿ ಅಂದರೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಅನಗತ್ಯ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಿದೆ ಹಾಗೂ ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳಿಗೆ ಈ ನಿಷೇಧಾಜ್ಞೆಯಲ್ಲಿ ವಿನಾಯಿತಿ ನೀಡಲಾಗಿದೆ.

District Collector MS Archana
ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ
author img

By

Published : May 19, 2020, 8:21 AM IST

ರಾಮನಗರ : ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ‌ ಅದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್‌ ಸಡಿಲಿಕೆ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ದಿನಾಂಕ 17-05-2020 ರಿಂದ 31-05-2020ರ ಮಧ್ಯರಾತ್ರಿಯವರೆಗೆ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶಗಳನ್ವಯ ಸಿ.ಆರ್.ಪಿ.ಸಿ 1973 ಕಲಂ 144 (1) ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಅಂದರೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಅನಗತ್ಯ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಿದೆ ಹಾಗೂ ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳಿಗೆ ಈ ನಿಷೇಧಾಜ್ಞೆಯಲ್ಲಿ ವಿನಾಯಿತಿ ನೀಡಲಾಗಿದೆ.

ರಾಜ್ಯ ಸರ್ಕಾರದಿಂದ ವಿನಾಯಿತಿ ನೀಡಲಾಗಿರುವ ಸೇವೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಂಸ್ಥೆಗಳು/ಸಿಬ್ಬಂದಿ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಕ್ರಮಗಳನ್ನು ವಹಿಸುವುದು ಹಾಗೂ ಆರೋಗ್ಯ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿರುವ ಸಲಹೆ ಸೂಚನೆಗಳಂತೆ ಅಗತ್ಯ ಕ್ರಮಗಳನ್ನು ವಹಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟ‌ ಎಚ್ಚರಿಕೆ‌ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.