ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರಕ್ಕೆ ಆಗಮಿಸಿದ್ದಾರೆ. ಮತದಾನಕ್ಕೂ ಮುನ್ನ ಅವರು ಪಕ್ಷದ ಗೆಲುವಿಗಾಗಿ ತಮ್ಮ ಮನೆ ದೇವರಾದ ಕೆಂಕೇರಮ್ಮಗೆ ಕುಟುಂಬಸಮೇತರಾಗಿ ಪೂಜೆ ನೆರವೇರಿಸಿದರು. ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಮತ ಚಲಾವಣೆ ಮಾಡಲಿದ್ದಾರೆ. ಪತ್ನಿ ಉಷಾ ಶಿವಕುಮಾರ್ ಮಗ ಆಕಾಶ್ ಜೊತೆಗೆ ಮತಗಟ್ಟೆಗೆ ಆಗಮಿಸಲಿದ್ದಾರೆ.
ಮತದಾನಕ್ಕೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಡಿಕೆಶಿ, ಪ್ರತಿ ಬಾರಿ ಮತದಾನ ಮಾಡುವ ಮುನ್ನ ನಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸುತ್ತೇವೆ. ನಮ್ಮ ಮಗ ಮತ್ತು ಮಗಳು ಕೂಡಿ ಮತದಾನ ಮಾಡುತ್ತಿದ್ದಾರೆ. ಆಕಾಶ್ ಮೊದಲ ಬಾರಿಗೆ ಮತದಾನ ಮಾಡುತ್ತಿರುವುದಾಗಿ ಹೇಳಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಎಲ್ಲರಿಗೂ ಶುಭ ಕೋರುತ್ತೇನೆ. ಈ ಸಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: 'ಪ್ರಜಾಪ್ರಭುತ್ವದ ಗೆಲುವಿಗೆ ಮತ ಹಾಕಿ': ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವೋಟಿಂಗ್