ETV Bharat / state

ಅತ್ಯಂತ ಹೆಚ್ಚು ಮತಗಳಿಂದ ಡಿಕೆಶಿ ದಿಗ್ವಿಜಯ.. 1 ಲಕ್ಷದ 20 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವಿನ ನಾಗಾಲೋಟ

ಕನಕಪುರ ಕ್ಷೇತದ ಡಿ.ಕೆ.ಶಿವಕುಮಾರ್​ 8ನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ.

Etv BharatDK Shivakumar wins against R Ashok in Kanakapur
ಕನಕಪುರ ಬಂಡೆ ಡಿಕೆ ಶಿವಕುಮಾರ್​ಗೆ 8ನೇ ಗೆಲುವು: ಬಿಜೆಪಿಯ ಆರ್​ ಆಶೋಕ್​ ವಿರುದ್ಧ 50 ಸಾವಿರ ಮತದ ಜಯ​
author img

By

Published : May 13, 2023, 12:36 PM IST

Updated : May 13, 2023, 6:08 PM IST

ರಾಮನಗರ: ಕನಕಪುರ ಬಂಡೆ ಎಂದೇ ಖ್ಯಾತರಾಗಿದ್ದ ಡಿ.ಕೆ.ಶಿವಕುಮಾರ್​ ಮತ್ತೆ 8ನೇ ಬಾರಿಗೆ ಅಭೂತ ಪೂರ್ವ ಗೆಲುವು ದಾಖಲಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಕಂದಾಯ ಸಚಿವರಾಗಿದ್ದ ಆರ್.ಅಶೋಕ್​ ಅವರನ್ನು ಕಣಕ್ಕಿಳಿಸಲಾಗಿತ್ತು. ಡಿಕೆಶಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ತಮ್ಮದೇ ವರ್ಚಸ್ಸು ಹೊಂದಿರುವ ಜನ ನಾಯಕರಾಗಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಆಗಿರುವ ಅವರು, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ. ಕಾಂಗ್ರೆಸ್ ಹೈಕಮಾಂಡ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಮುಖ್ಯಮಂತ್ರಿ ಆಗುವ ಪಟ್ಟಿಯಲ್ಲಿ ಮೊದಲಿಗರು.

ಡಿಕೆ ಶಿವಕುಮಾರ್ ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಅಂದರೆ 1ಲಕ್ಷದ 20 ಸಾವಿರಕ್ಕೂ ಅಧಿಕ ಮತ ಪಡೆದು ಗೆಲುವು ಸಾಧಿಸಿದ್ದಾರೆ. 1,42,156 ಮತ ಪಡೆದರೆ, ಹತ್ತಿರದ ಪ್ರತಿಸ್ಪರ್ಧಿ ಜೆಡಿಎಸ್​​ನ ನಾಗರಾಜ 20561 ಹಾಗೂ ಸಚಿವ ಆರ್ ಅಶೋಕ್​ ಮೂರನೇ ಸ್ಥಾನಕ್ಕೆ ತಳ್ಳಲ್ಙಪಟ್ಟಿದ್ದಾರೆ. ಅಶೋಕ್​ ಪಡೆದಿದ್ದು ಕೇವಲ 19602 ಮತಗಳನ್ನಷ್ಟೆ.

ಕಳೆದ ಬಾರಿ ಪುಲಕೇಶಿ ನಗರದಲ್ಲಿ ಕಾಂಗ್ರೆಸ್​ ಅಖಂಡಾ ಶ್ರೀನಿವಾಸ ಮೂರ್ತಿ 84 ಸಾವಿರ ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದರು. ಈ ಬಾರಿ ಅದಕ್ಕೂ ಮೀರಿದ ಸಾಧನೆಯನ್ನು ಡಿಕೆಶಿ ಮಾಡಿದ್ದಾರೆ.

ವೈಯಕ್ತಿಯ ಪರಿಚಯ: ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರರಾಗಿ ಶಿವಕುಮಾರ್ 15 ಮೇ 1962 ರಂದು ಜನಿಸಿದರು. 1993 ರಲ್ಲಿ ಉಷಾ ಎಂಬುವರನ್ನು ವಿವಾಹವಾದ ಶಿವಕುಮಾರ್ ದಂಪತಿಗೆ, ಐಶ್ವರ್ಯ, ಆಭರಣ ಮತ್ತು ಆಕಾಶ್ ಎಂಬ ಮೂವರು ಮಕ್ಕಳಿದ್ದಾರೆ. ಸಹೋದರ ಡಿ.ಕೆ.ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿದ್ದಾರೆ. ಸದ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾಗಿದ್ದ ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಕನಕಪುರದಿಂದ ಕಣಕ್ಕೆ ಇಳಿದಿದ್ದರು.

ಡಿಕೆಶಿ ರಾಜಕೀಯ ಬೆಳವಣಿಗೆ: 1989ರಲ್ಲಿ ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರದಲ್ಲಿದ್ದ ಜೆಡಿಎಸ್‌ ಪ್ರಭಾವ ಕಡಿಮೆಗೊಳಿಸಿದರು. 1991ರಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರವಹಿಸಿದ್ದರು. ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಹೊಣೆಯನ್ನು ಅವರಿಗೆ ನೀಡಲಾಗಿತ್ತು. 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಆಯ್ಕೆಗೊಂಡ ಅವರು, ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾದರು. 2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರ ಕ್ಷೇತ್ರಕ್ಕೆ ಬಂದರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಕನಕಪುರದಿಂದ ಸತತ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. 2013ರ ಸಿದ್ದರಾಮಯ್ಯ ಅವರ ಸಂಪುಟ ಸೇರಿ ಇಂಧನ ಖಾತೆ ವಹಿಸಿಕೊಂಡರು. ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದರು.

ವಿದ್ಯಾರ್ಥಿಯಿಂದ ರಾಜಕಾರಣಿಯಾದ ಡಿಕೆಶಿ: ಡಿ.ಕೆ.ಶಿವಕುಮಾರ್ 1980ರ ದಶಕದ ಆರಂಭದಲ್ಲಿ ವಿದ್ಯಾರ್ಥಿ ನಾಯಕರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಕ್ರಮೇಣ ಕಾಂಗ್ರೆಸ್ ಪಕ್ಷದ ಶ್ರೇಣಿಯ ಮೂಲಕ ಹುದ್ದೆಗೇರಿದರು. 1989 ರಲ್ಲಿ ಸಾತನೂರು ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದಾಗ ಅವರು ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಆಗ ಅವರಿಗೆ ಕೇವಲ 27 ವರ್ಷ. ಕನಕಪುರ ಕ್ಷೇತ್ರ ರಚನೆ ಬಳಿಕ ಸತತ ಗೆದ್ದು ಪ್ರಾಬಲ್ಯ ಸ್ಥಾಪಿಸಿದವರು. 2018ರ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜನತಾ ದಳ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಡಿಕೆ ಶಿವಕುಮಾರ್ ಕಾಂಗ್ರೆಸ್​ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಆಪ್ತರೂ ಆಗಿದ್ದಾರೆ. ಅವರು ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿಯೂ ಒಬ್ಬರಾಗಿದ್ದಾರೆ. 2018ರ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಅವರು ಒಟ್ಟು 840 ಕೋಟಿ ಆಸ್ತಿಯನ್ನು ಘೋಷಿಸಿದ್ದರು. ಪ್ರಸ್ತುತ 1 ಸಾವಿರದ 400 ಕೋಟಿಗೂ ಅಧಿಕ ಆಸ್ತಿ ವಿವರ ಘೋಷಣೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಇದುವರೆಗೂ ಯಾರು ನನ್ನ ಸಂಪರ್ಕಿಸಿಲ್ಲ; ಎಚ್​​ಡಿ ಕುಮಾರಸ್ವಾಮಿ

Last Updated : May 13, 2023, 6:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.