ರಾಮನಗರ : ಅತ್ತ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಡಿ.ಕೆ ಶಿವಕುಮಾರ್ ವಿಚಾರಣೆ ನಡೆಯುತ್ತಿದ್ದು, ಇಂದು ಸಹ ಕೋರ್ಟ್ಗೆ ಹಾಜರುಪಡಿಸಬೇಕಿದೆ. ಇತ್ತ ಕನಕಪುರದಲ್ಲಿ ಸಹ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದು ಡಿಕೆಶಿ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಕನಕಪುರದ ನಗರಸಭೆ ಎದುರು ಧರಣಿ ಕುಳಿತಿರುವ ಕಾರ್ಯಕರ್ತರು, ಕಳೆದ 8 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರು ಹಾಗೂ ಸಂಘ ಸಂಸ್ಥೆಗಳು ಸಾಥ್ ನೀಡಿದ್ದು, ಕಪ್ಪುಪಟ್ಟಿ ಧರಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಡಿಕೆಶಿ ಬಿಡುಗಡೆಯಾಗುವ ತನಕ ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.