ETV Bharat / state

ಸಿ.ಪಿ.ಯೋಗೇಶ್ವರ್​​​ಗೆ ಸಿಗಲಿದೆಯೇ ಸಚಿವ ಸಂಪುಟದ ಭಾಗ್ಯ? - ಸಚಿವ ಸಂಪುಟ ವಿಸ್ತರಣೆ

ಮೈತ್ರಿ ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿ.ಪಿ.ಯೋಗೇಶ್ವರ್​ ಅವರು ಅತೃಪ್ತ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

MLC CP Yogeshwar
ಸಿ.ಪಿ.ಯೋಗೇಶ್ವರ್​​​
author img

By

Published : Jan 12, 2021, 8:37 PM IST

ರಾಮನಗರ: ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್​ ಹಸಿರು ನಿಶಾನೆ ತೋರಿದ್ದು, ಸದ್ಯದಲ್ಲೇ ನೂತನ ಸಚಿವರ ಹೆಸರು ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ. ಬಿಎಸ್​​ವೈ ಭೇಟಿಗೆ ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದು, ಅದರಲ್ಲಿ ವಿಧಾನ ಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್ ಕೂಡ ಒಬ್ಬರು.

ಇದನ್ನೂ ಓದಿ: ಜಿಪಂ ಅಭಿವೃದ್ಧಿ ಕಾರ್ಯಗಳ ಹಿನ್ನಡೆಗೆ ಸಿಎಂ ಅಸಮಾಧಾನ: ಇಬ್ಬರು ಅಧಿಕಾರಿಗಳ ಅಮಾನತಿಗೆ ಸೂಚನೆ

ಸಚಿವ ಸಂಪುಟಕ್ಕೆ ಸೇರುವ ತವಕದಲ್ಲಿರುವ ಸಿಪಿವೈಗೆ ಆ ಭಾಗ್ಯ ಸಿಗಲಿದೆಯೇ ಎಂಬ ಅನುಮಾನ ಮೂಡಿದೆ. ಮತ್ತೊಂದೆಡೆ ಬಿಜೆಪಿ ಹೈಕಮಾಂಡ್ ಸಿಪಿವೈಗೆ ಸಚಿವ ಸ್ಥಾನ ನೀಡುವ ಒಲವಿದೆ ಎಂಬ ಮಾತುಗಳು ಕೇಳಿಬಂದಿವೆ. ಮೈತ್ರಿ ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಪಿವೈ ಅತೃಪ್ತ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಟಾಂಗ್ ನೀಡಲಿರುವ ಏಕೈಕ ವ್ಯಕ್ತಿ ಯೋಗೇಶ್ವರ್​​. ರಾಮನಗರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಉದ್ದೇಶದಿಂದ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.