ETV Bharat / state

ರಾಮನಗರ: ಹೆಚ್​ ಡಿ ಕುಮಾರಸ್ವಾಮಿ ಭೇಟಿಯಾದ ಡಾ. ಕೆ ಸುಧಾಕರ್

author img

By ETV Bharat Karnataka Team

Published : Jan 15, 2024, 10:33 PM IST

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಡಾ ಕೆ ಸುಧಾಕರ್ ಅವರು ಭೇಟಿ ಮಾಡಿ ಚರ್ಚಿಸಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಭೇಟಿಯಾದ ಡಾ ಕೆ ಸುಧಾಕರ್

ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುತ್ತಿವೆ. ಈ ನಡುವೆ ಮಾಜಿ ಸಚಿವ ಡಾ. ಕೆ ಸುಧಾಕರ್ ಬಿಡದಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತುಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಮನೆಗೆ ಬಿಜೆಪಿ ಸರ್ಕಾರದಲ್ಲಿ ವೈದ್ಯಕೀಯ ಸಚಿವರಾಗಿದ್ದ ಡಾ. ಕೆ ಸುಧಾಕರ್, ಹೆಚ್​ಡಿಕೆ ಭೇಟಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಬಗ್ಗೆ ಕೆಲ ಕಾಲ ಚರ್ಚೆ ನಡೆಸಿದರು.

ಹಾಗೆಯೇ ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದು, ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಎರಡು ಪಕ್ಷಗಳ ಮುಖಂಡರನ್ನ ಒಮ್ಮತವಾಗಿ ತೆಗೆದುಕೊಂಡು ಹೋಗಿ ಚುನಾವಣೆ ಗೆಲ್ಲಿಸುವ ತಂತ್ರ ರೂಪಿಸಿದ್ದಾರೆ.

ಹೆಚ್. ಡಿ ದೇವೇಗೌಡರನ್ನ ಭೇಟಿಯಾದ ಸುಧಾಕರ್ : ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ಳದ ಮಾಜಿ ಸಚಿವ ಡಾ. ಕೆ ಸುಧಾಕರ್‌ ಅವರು ಇದೀಗ ಜೆಡಿಎಸ್‌ ವರಿಷ್ಠ ಹೆಚ್. ಡಿ ದೇವೇಗೌಡ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಪದ್ಮನಾಭನಗರ ನಿವಾಸಕ್ಕೆ ಇಂದು ತೆರಳಿದ ಸುಧಾಕರ್‌ ಅವರು ದೇವೇಗೌಡ ಅವರನ್ನು ಭೇಟಿ ಮಾಡಿ, ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.

ಹೆಚ್. ಡಿ ದೇವೇಗೌಡರನ್ನ ಭೇಟಿಯಾದ ಸುಧಾಕರ್
ಹೆಚ್. ಡಿ ದೇವೇಗೌಡರನ್ನ ಭೇಟಿಯಾದ ಸುಧಾಕರ್

ಇದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಕುರಿತು ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಗೌಡರ ಜೊತೆ ಸಮಾಲೋಚನೆ ನಡೆಸಿದರು. ಸುಧಾಕರ್‌ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ - ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ ಎಂದು ಹೇಳಲಾಗುತ್ತಿದೆ.

ಚುನಾವಣೆಗೆ ಟಿಕೆಟ್‌ ನೀಡುವ ವಿಚಾರವು ಬಿಜೆಪಿ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಜೆಡಿಎಸ್‌ ಕೆಲಸ ಮಾಡಲಿದೆ ಎಂಬ ಮನವರಿಕೆಯನ್ನು ದೇವೇಗೌಡ ಅವರು ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಹೆಚ್. ಡಿ ದೇವೇಗೌಡರೊಂದಿಗೆ ಚರ್ಚಿಸುತ್ತಿರುವ ಡಾ ಕೆ ಸುಧಾಕರ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ ಆರಂಭವಾಗಿದೆ. ಈ ನಡುವೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬಿಡದಿ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ನಾಯಕರಿಂದ ಆಮಿಷ: ಹೆಚ್ ಡಿ ಕುಮಾರಸ್ವಾಮಿ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.