ರಾಮನಗರ: ಚನ್ನಪಟ್ಟಣ ತಾಲೂಕಿನ ಬಿ ವಿ ಹಳ್ಳಿ ಗ್ರಾಮದ ತೆಂಗಿನಕಲ್ಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಪುಂಡಾಟ ನಡೆಸುತ್ತಿದ್ದ ಮತ್ತೊಂದು ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಈ ಭಾಗದಲ್ಲಿ ಇನ್ನೊಂದು ಪುಂಡಾನೆಗಳನ್ನು ಹಿಡಿಯಲು ಅನುಮತಿ ದೊರೆತಿದ್ದು, ಒಂದು ಕಾಡಾನೆಯನ್ನು ಕಳೆದ ಐದಾರು ದಿನಗಳ ಹಿಂದೆ ಸೆರೆಹಿಡಿಯಲಾಗಿದೆ. ಸೆರೆಸಿಕ್ಕ ಆನೆಯನ್ನು ಮಲೆ ಮಹದೇಶ್ವರ ಬೆಟ್ಟ ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ನಗರದಲ್ಲಿ ಆಗಸ್ಟ್ 23ರವರೆಗೆ 144 ಸೆಕ್ಷನ್ ವಿಸ್ತರಣೆ