ETV Bharat / state

ವಿದ್ಯುತ್​ ತಂತಿ ಬೇಲಿ ತಗುಲಿ ಆನೆ ಸಾವು: ಹೂತು ಹಾಕಿದ ಮೂವರ ವಿರುದ್ಧ ಪ್ರಕರಣ ದಾಖಲು - ಅರ್ಜುನ ಆನೆ ಕಾಡಾನೆ ದಾಳಿಗೆ ಮೃತ

ರಾಮನಗರದಲ್ಲಿ ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಮೃತಪಟ್ಟ ಆನೆಯನ್ನು ಹೂತು ಹಾಕಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Etv Bharat
ವಿದ್ಯುತ್​ ತಂತಿ ಬೇಲಿ ತಗುಲಿ ಆನೆ ಸಾವು : ಹೂತು ಹಾಕಿದ ಮೂವರ ವಿರುದ್ಧ ಪ್ರಕರಣ ದಾಖಲು
author img

By ETV Bharat Karnataka Team

Published : Dec 6, 2023, 10:56 PM IST

ರಾಮನಗರ: ಜಮೀನಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಮೃತಪಟ್ಟ ಆನೆಯನ್ನು ಜಮೀನಿನಲ್ಲಿಯೇ ಗುಂಡಿ ತೋಡಿ ಮಣ್ಣು ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕನಕಪುರ ತಾಲೂಕಿನ ಸಂತೆಕೋಡಿಹಳ್ಳಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಸುಮಾರು 15 ವರ್ಷದ ಗಂಡಾನೆಯೊಂದು ಜಮೀನಿಗೆ ಹಾಕಿದ್ದ ವಿದ್ಯುತ್​ ತಂತಿ ತಗುಲಿ ಮೃತಪಟ್ಟಿತ್ತು. ಬಳಿಕ ಆನೆ ಮೃತಪಟ್ಟಿರುವುದನ್ನು ಕಂಡ ಆರೋಪಿಗಳು ಸ್ಥಳದಲ್ಲಿಯೇ ಗುಂಡಿ ತೆಗೆದು ಹೂತು ಹಾಕಿದ್ದಾರೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸಂತೇಕೋಡಹಳ್ಳಿಯ ನಂಜೇಗೌಡ ಎಂಬವರಿಗೆ ಸೇರಿದ್ದ ಜಮೀನನ್ನು ಪಿಳ್ಳೇಗೌಡ ಎಂಬವರು ಬೋಗ್ಯಕ್ಕೆ ಪಡೆದುಕೊಂಡು ವ್ಯವಸಾಯ ಮಾಡುತ್ತಿದ್ದರು. ಆನೆಗಳ ಹಾವಳಿ ಹೆಚ್ಚಿದ ಕಾರಣ ಬೆಳೆಗಳ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ಬೇಲಿ ಅಳವಡಿಸಿದ್ದರು. ಕಳೆದ ಮೂರು ದಿನಗಳ ಹಿಂದೆ ವಿದ್ಯುತ್ ಸ್ಫರ್ಶಿಸಿ ಆನೆ ಮೃತಪಟ್ಟಿದೆ. ಈ ವೇಳೆ ಅರಣ್ಯ ಇಲಾಖೆಗೆ ಸಿಕ್ಕಿಬೀಳುವ ಭಯದಲ್ಲಿ ಜೆಸಿಬಿ ಮೂಲಕ ಆನೆಯನ್ನು ಸ್ಥಳದಲ್ಲಿಯೇ ಹೂಳಿ, ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ದೊರೆತಿದ್ದು, ಸ್ಥಳ ಪರಿಶೀಲನೆ ನಡೆಸಿದಾಗ ಘಟನೆ ನಡೆದಿರುವುದು ಕಂಡುಬಂದಿದೆ. ನಂತರ ಆನೆಯನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿದ್ಯುತ್ ಶಾಕ್‌ನಿಂದ ಆನೆ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ದಂತವನ್ನು ಬೇರ್ಪಡಿಸಿ ಅದೇ ಜಾಗದಲ್ಲಿ ಆನೆಯ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಈ ಸಂಬಂಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ನಂಜೇಗೌಡ, ಬೋಗ್ಯದಾರ ಪಿಳ್ಳೇಗೌಡ ಮತ್ತು ಗುಂಡಿ ತೆಗೆದು ಆನೆಯನ್ನು ಹೂಳಲು ಸಹಕರಿಸಿದ ಜೆಸಿಬಿ ಚಾಲಕನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು: ಕಳೆದೆರಡು ದಿನಗಳ ಹಿಂದೆ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆ ಕಾಡಾನೆ ದಾಳಿಗೆ ಮೃತಪಟ್ಟಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಘಟನೆ ನಡೆದಿತ್ತು. ಕ್ಯಾ.ಅರ್ಜುನ ಜಂಬೂಸವಾರಿಯ ಕೇಂದ್ರ ಬಿಂದುವಾಗಿದ್ದನು. ಒಟ್ಟು ಎಂಟು ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ಸೈ ಎನಿಸಿಕೊಂಡಿದ್ದನು.

ಇದನ್ನೂ ಓದಿ: ಕಾಡಾನೆ ದಾಳಿ; ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು, ಕಣ್ಣೀರಿಟ್ಟ ಮಾವುತರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.