ETV Bharat / state

ಚನ್ನಪಟ್ಟಣದಲ್ಲಿ 500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ಸ್ಥಾಪನೆ.. - Corona in Ramanagar

ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವವರು ಅವರೇ ಆ ಆಸ್ಪತ್ರೆಯ ಖರ್ಚು ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದ ಮೀಸಲು ಖೋಟಾದ ಹಾಸಿಗೆಗಳನ್ನು ಹೊರತು ಪಡಿಸಿ, ಖಾಸಗಿ ಆಸ್ಪತ್ರೆಯ ವೆಚ್ಚದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ..

Establishment of a Covid Care of a capacity of 500 people in Channapatna: Ashwaththa Narayana
ಚನ್ನ ಪಟ್ಟಣದಲ್ಲಿ 500 ಜನರ ಸಾಮರ್ಥ್ಯದ ಕೋವಿಡ್ ಕೇರ್ ಸ್ಥಾಪನೆ: ಅಶ್ವತ್ಥ ನಾರಾಯಣ
author img

By

Published : Jul 3, 2020, 3:40 PM IST

ರಾಮನಗರ : ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್ ಕೇರ್‌ ಸೆಂಟರ್‌ ಪ್ರಾರಂಭಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್‌ ಅಶ್ವತ್ಥ್‌ ನಾರಾಯಣ ತಿಳಿಸಿದ್ದಾರೆ.

ಚನ್ನಪಟ್ಟಣದಲ್ಲಿ 500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ಸ್ಥಾಪನೆ..

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ್ರೂ ಅದನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚನ್ನಪಟ್ಟಣ ಆಸ್ಪತ್ರೆ ಉನ್ನತ ದರ್ಜೆಗೆ : ಚನ್ನಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿ ಉನ್ನತ ದರ್ಜೆಗೆ ಏರಿಸಲಾಗುವುದು. ಈ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೌಕರ್ಯ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ :

ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ ಚಿಕಿತ್ಸೆಗಾಗಿ ಇಂತಿಷ್ಟು ಪ್ರಮಾಣದ ಹಾಸಿಗೆಗಳನ್ನು ಮೀಸಲಿಟ್ಟು ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ವತಿಯಿಂದಲೇ ರೋಗಿಗಳನ್ನು ದಾಖಲಿಸಲಾಗುವುದು. ಸ್ಥಳೀಯ ಆಡಳಿತದ ವತಿಯಿಂದ ಆಸ್ಪತ್ರೆಗೆ ದಾಖಲಿಸಲು ಕ್ರಮ ವಹಿಸಲಾಗುವುದರ ಜೊತೆಗೆ ಬಡವರು, ಶ್ರೀಮಂತರು ಎನ್ನದೆ ಎಲ್ಲರಿಗೂ ಸರ್ಕಾರದಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು.

ಎಲ್ಲರಿಗೂ ಚಿಕಿತ್ಸೆ : ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವವರು ಅವರೇ ಆ ಆಸ್ಪತ್ರೆಯ ಖರ್ಚು ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದ ಮೀಸಲು ಖೋಟಾದ ಹಾಸಿಗೆಗಳನ್ನು ಹೊರತು ಪಡಿಸಿ, ಖಾಸಗಿ ಆಸ್ಪತ್ರೆಯ ವೆಚ್ಚದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ. ಎಲ್ಲರಿಗೂ ಚಿಕಿತ್ಸೆ ದೊರೆಯಬೇಕು ಅನ್ನೋ ಸದುದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಮನೆಯಲ್ಲೇ ಚಿಕಿತ್ಸೆ : ಕೋವಿಡ್-19 ರೋಗ ಲಕ್ಷಣವಿಲ್ಲದವರಿಗೆ ಆಸ್ಪತ್ರೆಯ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ ಅಂತವರು ಅವರ ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳಬಹುದು. ಕೋವಿಡ್-19 ಇನ್ನೂ ನಿಯಂತ್ರಣದಲ್ಲಿದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಚಿಕಿತ್ಸೆ ಲಭ್ಯವಾಗಲಿದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಕೋವಿಡ್ ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಹಾಗೆಯೇ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದರು.

ಪರೀಕ್ಷಾ ಸಂಖ್ಯೆ ಹೆಚ್ಚಳ : ಶಂಕೆ ಇರುವವರಿಗೆಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ವಿದೇಶದಿಂದ ಬಂದವರು, ಹೊರರಾಜ್ಯದಿಂದ ಬಂದವರಿಗೂ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.