ETV Bharat / state

ಹಳೇ ದ್ವೇಷದ ಶಂಕೆ: ಆರ್​ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ - ರಾಮನಗರ ಎಸ್​ಪಿ ಗಿರೀಶ್

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

Fatal assault on RTI activist
ಆರ್​ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
author img

By

Published : Jul 16, 2021, 4:24 PM IST

ರಾಮನಗರ: ಆರ್​ಟಿಐ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್​ಟಿಐ ಕಾರ್ಯಕರ್ತ ಮಾಮಯ್ಯ ಅಲಿಯಾಸ್ ವೆಂಕಟೇಶ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶ್​ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಘಟನೆ ನಡೆದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

Fatal assault on RTI activist
ಆರ್​ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ ಎಸ್​ಪಿ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಇದನ್ನೂ ಓದಿ: ಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ ವೇಳೆ ಗೋಡೆ ಕುಸಿದು ಅದರೊಳಗೆ ಬಿದ್ದ 40 ಜನ; ಇಬ್ಬರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.