ರಾಮನಗರ: ಅನುಮತಿ ಪಡೆಯದೆ, ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಂಸದ ಡಿ.ಕೆ. ಸುರೇಶ್ ಸೇರಿದಂತೆ 41 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾನುವಾರ ಮೇಕೆದಾಟಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಎಫ್ಐಅರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಡಿಕೆಶಿ ಹಾಗು ಸಿದ್ದರಾಮಯ್ಯ ನೇತೃತ್ವದಲ್ಲಿ ರೇಷ್ಮೆನಗರಿ ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಒಬ್ಬ ವ್ಯಕ್ತಿಯ ಅಕ್ರಮ ಸಂಪತ್ತಿನ ಪ್ರದರ್ಶನ: ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ
ಕೋವಿಡ್ ನಿಮಯ ಉಲ್ಲಂಘನೆ ಆರೋಪ ದೂರು ದಾಖಲಾಗಿದ್ದು, ರಾಮನಗರ ತಹಶೀಲ್ದಾರ್ ದೂರು ನೀಡಿದ ಹಿನ್ನೆಲೆ ರಾಮನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.