ETV Bharat / state

ಚಿರತೆ ದಾಳಿಗೆ ಬಲಿಯಾದ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ ಅರಣ್ಯ ಸಚಿವ ಆನಂದ್ ಸಿಂಗ್​...

ರಾಮನಗರದ ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಬಲಿಯಾದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಸಾಂತ್ವನ ಹೇಳಿದರು.

Ramanagara
ಮೃತಪಟ್ಟ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ ಅರಣ್ಯ ಸಚಿವ ಆನಂದ್ ಸಿಂಗ್​
author img

By

Published : May 10, 2020, 7:59 AM IST

ರಾಮನಗರ: ತಡರಾತ್ರಿ ಮನೆಗೆ ನುಗ್ಗಿದ ಚಿರತೆ ಮಲಗಿದ್ದ ಮಗುವನ್ನು ಹೊತ್ತೊಯ್ದು ಅರೆಬರೆ ತಿಂದು ಹತ್ಯೆಗೈದ ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಮೃತ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಂದ್ರಪ್ಪ ಮಂಗಳಗೌರಮ್ಮ ದಂಪತಿಯ ಪುತ್ರ ಮೂರು ವರ್ಷದ ಮಗು ಹೇಮಂತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಘಟನೆಯಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಪ್ರತಿಭಟಿಸಿ ಸಚಿವರು ಖುದ್ದು ಭೇಟಿ ನೀಡಬೇಕೆಂದು ಒತ್ತಾಯಿಸಿದ ಹಿನ್ನೆಲೆ ಭೇಟಿ ನೀಡಿದ ಅರಣ್ಯ ಸಚಿವ ಆನಂದ್ ಸಿಂಗ್ ಮೃತ ಮಗುವಿನ ಕುಟುಂಬದವರು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದೇ ವೇಳೆ ಮಗುವಿನ ಕುಟುಂಬಕ್ಕೆ 7.50.000 ರೂಪಾಯಿ ಪರಿಹಾರ ಘೋಷಣೆ ಮಾಡಿದರು. ಅರಣ್ಯ ಸಚಿವ ಆನಂದ್ ಸಿಂಗ್​ ಅವರೊಂದಿಗೆ ಸಂಸದ ಡಿ.ಕೆ.ಸುರೇಶ್, ಮಾಗಡಿ‌ ಶಾಸಕ ಎ.ಮಂಜುನಾಥ ,ಅರಣ್ಯ ಇಲಾಖೆ ಸಿಬ್ಬಂದಿ, ಆರಕ್ಷಕ ಸಿಬ್ಬಂದಿ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.