ETV Bharat / state

ಸರಣಿ ಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ - ETV Bharat Kannada

ನಾಳೆ ನಾನು ಮಂಗಳೂರಿಗೆ ಭೇಟಿ ನೀಡಿ, ಹತ್ಯೆಯಾಗಿರುವ ಮೂರು ಕುಟುಂಬಗಳನ್ನೂ ಮಾತನಾಡಿಸಲಿದ್ದೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದರು.

Former CM HD Kumaraswamy
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
author img

By

Published : Jul 31, 2022, 1:45 PM IST

ರಾಮನಗರ: ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಎರಡು ಕೋಮುಗಳ ನಡುವೆ ಸಾಮರಸ್ಯದ ಕೊರತೆ ಇದೆ. ಇದನ್ನು ಸರಿಪಡಿಸುವುದು ಸರ್ಕಾರದ ಕೆಲಸ. ಎಲ್ಲಾ ಸಮಾಜವನ್ನು ಬೆಸೆಯುವ ಕೆಲಸ ಸರ್ಕಾರದಲ್ಲಿ ಆಗುತ್ತಿಲ್ಲ. ಸಮಾಜದಲ್ಲಿ ಕೋಮು ಭಾವನೆ ಮೂಡುವ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಸರಣಿ ಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಐತಿಹಾಸಿಕ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ತಾಯಿಯ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಗಮಿಸಿ ತಾಯಿಯ ಆಶೀರ್ವಾದ ಪಡೆದ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಶಾಸಕರಾದ ಡಿ.ಸಿ.ತಮ್ಮಣ್ಣ, ಅನ್ನದಾನಿ ಜೊತೆಗಿದ್ದರು.

ನಾನು ಮುಖ್ಯಮಂತ್ರಿಗಳಿಂದ ಈ ರೀತಿಯ ಮಂಗಳೂರಿನ ಪ್ರವಾಸ ನಿರೀಕ್ಷೆ ಮಾಡಿರಲಿಲ್ಲ. ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ನಡುವಳಿಕೆ ಬಗ್ಗೆ ಜನರಿಗೆ ಅಸಮಾಧಾನ ಇದೆ. ಕೋಮುಗಲಭೆಯಿಂದ ಅಭಿವೃದ್ಧಿಯ ವಾತಾವರಣ ಮಂಗಳೂರಿನಲ್ಲಿ ಹಾಳಾಗಿದೆ. ರಾಜಕೀಯ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಘಟನೆ ಮಾಡಲು ನನ್ನ ಅಭ್ಯಂತರವಿಲ್ಲ ಸಂಘಟನೆ ಹೆಸರಲ್ಲಿ ಸಮಾಜವನ್ನು ಹಾಳುಮಾಡಬೇಡಿ. ಮೊದಲು ಮಾನವೀಯ ಮೌಲ್ಯ ಆಳವಡಿಸಿಕೊಳ್ಳಿ ಎಂದರು.

ನಾಳೆ ನಾನು ಮಂಗಳೂರಿಗೆ ಭೇಟಿ ನೀಡಿ, ಹತ್ಯೆಯಾಗಿರುವ ಮೂರು ಕುಟುಂಬಗಳನ್ನೂ ಮಾತನಾಡಿಸಲಿದ್ದೇನೆ. ಬಡಮಕ್ಕಳ ಸಾವು ನೋವುಗಳನ್ನು ಬಂಡವಾಳ ಮಾಡಿಕೊಂಡಿದ್ದಾರೆ. ಇಲ್ಲಿ ದೊಡ್ಡ ಮಟ್ಟಿನ ಷಡ್ಯಂತ್ರ ಇದೆ. ಧರ್ಮದ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಯುವಕರನ್ನು ದಾರಿ ತಪ್ಪಿಸಲಾಗುತ್ತಿದೆ. ಯುವಕರು ಇಂತಹ ವಿಚಾರಗಳಿಗೆ ಬಲಿಯಾಗಬೇಡಿ ಎಂದು ಇದೇ ವೇಳೆ ಸಲಹೆ ಕೊಟ್ಟರು.

ಇದನ್ನೂ ಓದಿ : ನಮ್ಮ ಸರ್ಕಾರ ಇಸ್ಲಾಮಿಕ್ ಜಿಹಾದಿ ಮಾನಸಿಕತೆ ಇಲ್ಲವಾಗಿಸುವ ಪ್ರತಿಬದ್ಧತೆ ಹೊಂದಿದೆ: 15 ಲಕ್ಷ ಪರಿಹಾರ ಘೋಷಿಸಿದ ತೇಜಸ್ವಿ ಸೂರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.