ETV Bharat / state

ನನ್ನ ಅಧಿಕಾರದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿಲ್ಲ: ಹೆಚ್​ಡಿಕೆ - ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

ನನ್ನ ಜೀವನದಲ್ಲಿ ಎಂದೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಿಲ್ಲ. ಜನರ ಜೀವದ ಜೊತೆ ಚೆಲ್ಲಾಟವಾಡುವ ಯಾವುದೇ ಪಕ್ಷದ ವ್ಯಕ್ತಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕು..

Former CM H D Kumarswamy
ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ
author img

By

Published : Jan 23, 2021, 8:02 PM IST

ರಾಮನಗರ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸುವುದಿಲ್ಲ. ಆ ಸರ್ಕಾರದ ನಡವಳಿಕೆಗಳಿಂದ ರಾಜ್ಯದ ಜನರು ಬೇಸತ್ತಿದ್ದಾರೆ. ಸರಿಪಡಿಸಿಕೊಳ್ಳಲು ಇನ್ನೂ ಸಮಯವಿದೆ. ಇಲ್ಲವಾದರೆ, ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ...ಹುಣಸೋಡು ದುರಂತಕ್ಕೆ ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆ: ಸಿದ್ದರಾಮಯ್ಯ

ಚನ್ನಪಟ್ಟಣದಲ್ಲಿ ಇಂದು ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಅಕ್ರಮ ಕಲ್ಲುಗಣಿಗಾರಿಕೆಗೆ ಅವಕಾಶ ಕೊಟ್ಟಿರಲಿಲ್ಲ ಎಂದರು. ಕಾರ್ಯಕ್ರಮಕ್ಕೂ ಮುನ್ನ ತಾಲೂಕಿನ ಕೆಲಗೆರೆ ಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು ಎತ್ತಿನಗಾಡಿಯಲ್ಲಿ ಮೆರವಣಿಗೆ ಮಾಡಿದರು.

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಅವರು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಸಚಿವ ನಾರಾಯಣಗೌಡ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಷ್ಟು ತಿಂಗಳಾಗಿದೆ. ಈಗ ಅವರಿಗೆ ಅಕ್ರಮ‌ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆಯೇ?ಮಾಹಿತಿಯಿದ್ದ ಮೇಲೆ ಏಕೆ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕ್ರಮ ಕೈಗೊಂಡಿಲ್ಲ. ಯಾಕೆ ಅವರು ಅಸಮರ್ಥರೇ ಎಂದು ಟಾಂಗ್ ಕೊಟ್ಟರು.

ಪ್ರಧಾನಿ ಮೋದಿ ಅವರೇನು ದೇಶದ ಬಗ್ಗೆ ಪಾಠ ಮಾಡುತ್ತಾರೋ, ಅದರಲ್ಲಿ ಕರ್ನಾಟಕದ ಅಭಿವೃದ್ಧಿಪಡಿಸುವ ವಿಷಯವಿರಲಿ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.