ETV Bharat / state

ಅನ್ಯ ಧರ್ಮದವರ ಆಕ್ಷೇಪ ಇಲ್ಲದಿರುವಾಗ ಮಸೀದಿ ಧ್ವನಿವರ್ಧಕಗಳ ಬಗ್ಗೆ ತಕರಾರೇಕೆ? : ಹೆಚ್​ಡಿಕೆ - ಹೆಚ್​ಡಿಕೆ ಭೇಟಿ ಮಾಡಲು ಬಂದ ಮಠಾಧೀಶರು

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್​ಡಿಕೆ ಅಭಿಪ್ರಾಯಪಟ್ಟಿದ್ದಾರೆ.

former-cm-hdk-on-loud-speakers-in-masjids
ಅನ್ಯ ಧರ್ಮದವರ ಆಕ್ಷೇಪ ಇಲ್ಲದಿರುವಾಗ ಮಸೀದಿ ಧ್ವನಿವರ್ಧಕಗಳ ತಕರಾರು ಏಕೆ? : ಹೆಚ್​ಡಿಕೆ ಪ್ರಶ್ನೆ, ಮಠಾಧೀಶರೊಂದಿಗೆ ಮಾತುಕತೆ
author img

By

Published : Apr 5, 2022, 2:32 PM IST

ಬೆಂಗಳೂರು: ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಅಗತ್ಯಬಿದ್ದರೆ ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಆಜಾನ್‌ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ಇವು ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು. ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ. ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದುದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದು ಹೇಳಿದ್ದಾರೆ.

  • ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು. 1/10

    — H D Kumaraswamy (@hd_kumaraswamy) April 5, 2022 " class="align-text-top noRightClick twitterSection" data=" ">

ನಸುಕಿನಲ್ಲಿ ಸುಪ್ರಭಾತ ಮತ್ತು ಆಜಾನ್ ಕೂಗುವ ಪರಿಪಾಠ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ. ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರವೇರಿಸಿ ಮಂಗಳಕರವಾದ ಘಂಟೆ ಬಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟುಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ. ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಬಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ತಿವಿದಿದ್ದಾರೆ.

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಭಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಹೆಚ್​​ಡಿಕೆ ಟ್ವಿಟರ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಹೆಚ್​ಡಿಕೆ ಭೇಟಿ ಮಾಡಲು ಬಂದ ಮಠಾಧೀಶರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಲು ರಾಜ್ಯದ ವಿವಿಧೆಡೆಯಿಂದ ಮಠಾಧೀಶರು ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಗೆ ಆಗಮಿಸಿದ್ದು, ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ. ವಾಲ್ಮೀಕಿ ಗುರುಪೀಠದ ಬ್ರಹ್ಮಾನಂದ ಗುರೂಜಿ, ಈಡಿಗ ಮಠದ ಪ್ರಣವಾನಂದ ಸ್ವಾಮೀಜಿ, ಬಂಜಾರ ಮಠದ ಸರ್ದಾರ್ ಸೇವಲಾಲ್ ಸ್ವಾಮೀಜಿ, ಬೋವಿ ಮಠದ ಗಂಗಾಧರೇಶ್ವರ ಸ್ವಾಮಿ ಸೇರಿದಂತೆ ವಿವಿಧ ಮಠಾಧೀಶರು ಇದ್ದರು.

ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ಮಾಜಿ ಸಿಎಂ ಹೆಚ್​ಡಿಕೆ ಮಾತು

ಮಾಜಿ ಸಿಎಂ ಹೆಚ್‌ಡಿಕೆ ಅವರ ಜೊತೆ ಸುದೀರ್ಘ ಮಾತುಕತೆ ನಡೆಸಿದ ಸ್ವಾಮೀಜಿಗಳು ಪ್ರಸ್ತುತ ರಾಜಕೀಯ ಪರಿಸ್ಥಿತಿ ಜೊತೆಗೆ ರಾಜ್ಯದಲ್ಲಿ ಸಾಮರಸ್ಯ ಹದಗೆಡುತ್ತಿರುವ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​​ಡಿಕೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿಯವರು ರಾಜ್ಯವನ್ನು ಲೂಟಿ ಮಾಡಿ ಹಣ ದೋಚಿದ್ದಾರೆ. ಈಗ ಭಾವನಾತ್ಮಕವಾದ ವಿಷಯ ಇಟ್ಟುಕೊಂಡು ಮತ ಕೇಳಲು ಸಂಘಟನೆ ಮಾಡಿಕೊಳ್ಳಲು ಹೊರಟ್ಟಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಸಹಾಯಧನ ಹೆಚ್ಚಳ : ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.