ರಾಮನಗರ : ಕಾಂಗ್ರೆಸ್ ಪಾರ್ಟಿ ಎಲ್ಲಿದೆ. ಕಾಂಗ್ರೆಸ್ ಪರಿಸ್ಥಿತಿ ಮೊದಲು ಚೆನ್ನಾಗಿತ್ತು. ಆದ್ರೆ, ಈಗ ತುಂಬಾ ಕೆಳ ಮಟ್ಟದಲ್ಲಿದೆ. ಈಗ ಎಲ್ಲಾ ಕಡೆ ಅಧಿಕಾರ ಕಳೆದುಕೊಂಡಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ಜನಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡುಗು. ಇನ್ನು 20 ವರ್ಷ ಕಳೆದರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.
ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು. ಆದರೆ, ಉತ್ತರ ಕರ್ನಾಟಕಕ್ಕೆ ಬಂದಿದ್ದರಿಂದ ಅವರನ್ನ ಜನ ಗೆಲ್ಲಿಸಿದರು. ಕಾಂಗ್ರೆಸ್ ಮುಳುಗುವ ಹಡಗಾಗಿದ್ದು, ಕಾಂಗ್ರೆಸ್ ಪಕ್ಷ ನಶಿಸಿ ಹೋಗುತ್ತಿದೆ ಎಂದರು.
ಹಾಗೆಯೇ ಕೇಂದ್ರದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದು, ಅದು ಕೇವಲ ನರೇಂದ್ರ ಮೋದಿ ಸರ್ಕಾರ. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಹಲವು ಕೆಲಸಗಳಾಗಿವೆ. ಕೋವಿಡ್ ಸಮಯದಲ್ಲೂ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನೇಷನ್ ಮಾಡಿಸುತ್ತೇನೆ ಎಂದಿದ್ದರು. ಅದರಂತೆ ದೇಶಾದ್ಯಂತ ಎಲ್ಲರಿಗೂ ವ್ಯಾಕ್ಸಿನ್ ಸಿಕ್ಕಿದೆ.
ಇಡೀ ಜಗತ್ತಿನಲ್ಲಿ ಹೆಚ್ಚಿನ ಸದಸ್ಯರು ಬಿಜೆಪಿಯಲ್ಲಿದ್ದಾರೆ. ಜಗತ್ತಿನಲ್ಲಿ 19 ಕೋಟಿ ಸದಸ್ಯರು ಬಿಜೆಪಿಯಲ್ಲಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ನಾನು ಪ್ರಶ್ನೆ ಮಾಡಿದ್ದೆ. ನಿಮ್ಮಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಎಂದು ಬಹಿರಂಗಪಡಿಸಿ ಎಂದಿದ್ದೆ. ಮನೆಗೆ ಹೋಗಿ ನರೇಂದ್ರ ಮೋದಿ ಹೆಸರು ಹೇಳಿದರೆ ಜನ ಟೀ ಕೊಟ್ಟು ಸದಸ್ಯರಾಗುತ್ತಾರೆ ಎಂದರು.
ಇನ್ನು 2023 ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರಿಗೂ ಜಗಳ ಶುರುವಾಗಿದೆ. ನಾನು ಮುಖ್ಯಮಂತ್ರಿಯಾಗಬೇಕು ಎಂದು ಕನಸು ಕಾಣುತ್ತಿದ್ದಾರೆ. ಹಾಗೆಯೇ, ವಿಧಾನ ಪರಿಷತ್ತಿನ ಚುನಾವಣೆಯ 25 ಸ್ಥಾನದಲ್ಲಿ15ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದು ಇದೇ ವೇಳೆ ಶೆಟ್ಟರ್ ತಿಳಿಸಿದರು.
ಇದೇ ವೇಳೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮಾತನಾಡಿ, ತಮಗೆ ಸಚಿವ ಸ್ಥಾನ ನಿಡದಿರುವುದಕ್ಕೆ ವೇದಿಕೆಯಲ್ಲೆ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿ ಘಟಾನುಗಡಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರಿದ್ದಾರೆ. ಇಬ್ಬರು ಕೂಡ ರಾಜ್ಯಾಧ್ಯಕ್ಷರಾಗಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ಯಾವುದೇ ಅಧಿಕಾರ ಇಲ್ಲ. ಕಾರ್ಯಕರ್ತರಿಗೆ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಪಕ್ಷ ಬಲವರ್ದನೆ ಮಾಡಬೇಕಾದ್ರೆ ಅಧಿಕಾರದ ಅವಶ್ಯಕತೆ ಇರುತ್ತೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಾರ್ಟಿಯಿಂದ ಘಟಾನುಘಟಿ ನಾಯಕರೇ ನಮ್ಮ ಪಕ್ಷ ಸೇರಲು ಮುಂದೆ ಬರುತ್ತಿದ್ದಾರೆ.
ಅಧಿಕಾರ ಇದ್ರೆ ಪಕ್ಷ ಸಂಘಟನೆ ಆಗುತ್ತೆ. ನಮ್ಮದೇ ಸರ್ಕಾರ ಇದ್ರು ಕೂಡ ಯಾವುದೇ ಕೆಲಸ ಆಗುತ್ತಿಲ್ಲ ಎಂದ ಅಸಮಾಧಾನ ಇದೆ. ಮುಂದೆ ಒಳ್ಳೆಯ ದಿನಗಳು ಬರುತ್ತದೆಂಬ ಆಸೆ ಇದೆ ಎಂದು ಪರೋಕ್ಷವಾಗಿ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನ ವೇದಿಕೆಯಲ್ಲೆ ಪ್ರಸ್ತಾಪಿಸಿದರು.