ರಾಮನಗರ: ಮಾಗಡಿಯ ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಪುತ್ರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬಾಲಕೃಷ್ಣ ಅವರು ಅಧಿಕೃತ ಟ್ಟಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಬಾಲಕೃಷ್ಣ ಪುತ್ರಿಗೆ ಕಳೆದ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದೆ. ಬಳಿಕ ಕೋವಿಡ್ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ಬಾಲಕೃಷ್ಣ ಅವರೇ ಎಂದು ತಮ್ಮ ಟ್ವಿಟರ್ನಲ್ಲಿ ಮಾಹಿತಿ ನೀಡಿ. ಜವಬ್ದಾರಿಯುತ ಜನಪ್ರತಿನಿಧಿಯಾಗಿ ಘೋಷಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ಇದೀಗ ಬಾಲಕೃಷ್ಣ ಪುತ್ರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.