ETV Bharat / state

ಪಾಕ್ ಪರ ಘೋಷಣೆ ಬಗ್ಗೆ ಆಕೆಗೆ ತಿಳುವಳಿಕೆ ಇತ್ತೋ ಇಲ್ವೋ ಗೊತ್ತಿಲ್ಲ: ಹೆಚ್​.ಡಿ.ಕುಮಾರಸ್ವಾಮಿ - ಅಮೂಲ್ಯ ಲಿಯೋನ್ ಪಾಕಿಸ್ಥಾನ ಜಿಂದಾಬಾದ್

ಅಮೂಲ್ಯ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ಖಂಡನೀಯ. ದೇಶ ಮುಖ್ಯ, ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಇಲ್ಲ, ಪ್ರಚಾರಕ್ಕಾಗಿ ಮಾಡಿದ್ದಾಳೋ..? ಆಕೆಗೆ ಈ ಬಗ್ಗೆ ತಿಳಿವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

h-d-kumaraswamy-reaction-on-amulya-pakistan-zindabad-slogan
ಹೆಚ್​. ಡಿ. ಕುಮಾರಸ್ವಾಮಿ
author img

By

Published : Feb 21, 2020, 1:56 PM IST

ರಾಮನಗರ: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ. ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಅಥವಾ ಪ್ರಚಾರಕ್ಕಾಗಿ ಮಾಡಿದ್ದಾಳೋ? ಆಕೆಗೆ ತಿಳಿವಳಿಕೆ ಇದೆಯೋ ಇಲ್ಲವೋ, ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ರಾಮನಗರದ ಹೊರವಲಯದಲ್ಲಿ ನಿಖಿಲ್ ವಿವಾಹ ಪ್ರದೇಶಕ್ಕೆ ಪೂಜೆ ಸಲ್ಲಿಕೆ ವೇಳೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರಾದ ಇಮ್ರಾನ್ ಸಹ ಕಾರ್ಯಕ್ರಮದ ಸಂಘಟನೆಯ ಹೊಣೆ ಹೊತ್ತಿದ್ದರು. ಘೋಷಣೆ ಕೂಗಿದ ಕೂಡಲೇ ಆಕೆಯ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟಕರಿಂದ ಆ ರೀತಿಯ ಉದ್ದೇಶಪೂರ್ವಕವಾಗಿ ಪ್ರಯತ್ನ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ.

ಅಮೂಲ್ಯ ಪಾಕಿಸ್ತಾನ ಪರ ಘೋಷಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್​. ಡಿ. ಕುಮಾರಸ್ವಾಮಿ

ಸಿಎಎ ವಿರೋಧಿ ಪ್ರತಿಭಟನೆ ಉದ್ದೇಶ ಏನೆಂಬುದು ಹೊರ ಬರ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಈ ರೀತಿಯ ಪ್ರಯತ್ನಗಳಿಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳಲು ಹೊರಟಿದೆ. ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ.

ಸಭೆಯಲ್ಲಿ ಹೋರಾಟಗಾರರು ತ್ರಿವರ್ಣ ಧ್ವಜ ಹಿಡಿದು ಹೋರಾಟ ನಡೆಸಿದ್ದಾರೆಯೇ ಹೊರತು ಪಾಕಿಸ್ತಾನದ ಧ್ವಜವನ್ನಲ್ಲ. ಯಾರೋ ಒಬ್ಬ ಕಿಡಿಗೇಡಿ ಘೋಷಣೆ ಕೂಗಿದ ಮಾತ್ರಕ್ಕೆ ಅದರ ಗಮನವನ್ನು ಬೇರೆ ಕಡೆಗೆ ಸೆಳೆಯುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ ನಡೆಸಿದರು. ಇದೇ ವೇಳೆ ರಾಜ್ಯದ ಜನತೆಗೆ ಶಿವರಾತ್ರಿ ಶುಭಾಶಯ ಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.