ETV Bharat / state

ಜವಾಬ್ದಾರಿ ಇರುವ ಮಂತ್ರಿಗಳು ಈ ರೀತಿ ಕೆಲಸ ಮಾಡಬಹುದೇ? : ರಾಮುಲು ವಿರುದ್ಧ ಹೆಚ್​ಡಿಕೆ ಕಿಡಿ

ರಾಜ್ಯದಲ್ಲಿ ರೇಷ್ಮೆ ಬೆಳೆಗಾರರು, ರೈತರು ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಜವಾಬ್ದಾರಿ ಇರುವಂತಹ ಮಂತ್ರಿಗಳು ಈ ರೀತಿ ಕೆಲಸ ಮಾಡಬಹುದೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಚಿವ ಶ್ರೀ ರಾಮುಲು ವಿರುದ್ಧ ಕಿಡಿಕಾರಿದ್ದಾರೆ.

ಮಾಜಿ ಸಿಎಂ
ಮಾಜಿ ಸಿಎಂ
author img

By

Published : Jun 2, 2020, 9:50 PM IST

ರಾಮನಗರ: ರಾಜ್ಯದಲ್ಲಿ‌ ಕೊರೊನಾ ಸೋಂಕಿನಿಂದ ಜನ ನರಳುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಬಡವರಿಗೆ ನೆರವಾಗುವ ಬದಲು ಆರೋಗ್ಯ ಸಚಿವ ಶ್ರೀರಾಮಲುಗೆ ಅದ್ದೂರಿ ಸ್ವಾಗತ ಕೋರಿ ಮೆರವಣಿಗೆಯಲ್ಲಿ ಬಾಗಿನ ಅರ್ಪಿಸುವುದು ಎಷ್ಟು ಸರಿ. ಜವಾಬ್ದಾರಿಯುತ ಮಂತ್ರಿಯಾಗಿ ಅವರಿಗೆ ತಿಳಿಯುವುದಿಲ್ಲವೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ, ಆರೋಗ್ಯ ಸಚಿವ‌ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಬಡವರಿಗೆ ಮತ್ತು ಪೌರ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಈ ಸಮಯದಲ್ಲಿ ಮೆರವಣಿಗೆ ಮೂಲಕ ಬಾಗಿನ ಅರ್ಪಿಸಿ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಜನರ ಪರವಾಗಿ ಕೆಲಸ ಮಾಡಬೇಕು. ಇಂತಹ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ರಾಜ್ಯದಲ್ಲಿ ರೇಷ್ಮೆ ಬೆಳೆಗಾರರು, ರೈತರು ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಜವಾಬ್ದಾರಿ ಇರುವಂತಹ ಮಂತ್ರಿಗಳು ಈ ರೀತಿ ಕೆಲಸ ಮಾಡಬಹುದೇ ಎಂದು ಸಚಿವ ರಾಮುಲು ವಿರುದ್ದ ವಾಗ್ದಾಳಿ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.