ETV Bharat / state

ಜೆಡಿಎಸ್​ ರಾಜ್ಯದಲ್ಲಿ ಬಹುಮತ ಪಡೆಯಲಿದೆ: ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ - ಶಾಸಕಿ ಅನಿತಾ ಕುಮಾರಸ್ವಾಮಿ

ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್​​ ಬಹುಮತ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.​

hd-kumaraswamy-and-family-casted-vote
ಜೆಡಿಎಸ್​ ರಾಜ್ಯದಲ್ಲಿ ಬಹುಮತ ಪಡೆಯಲಿದೆ : ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ
author img

By

Published : May 10, 2023, 3:44 PM IST

Updated : May 10, 2023, 4:29 PM IST

ಜೆಡಿಎಸ್​ ರಾಜ್ಯದಲ್ಲಿ ಬಹುಮತ ಪಡೆಯಲಿದೆ: ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ

ರಾಮನಗರ : ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದ್ದು, ನಾವು ನಮ್ಮ ಅಭ್ಯರ್ಥಿಗಳಿಗೆ ಹಣದ ಸಹಾಯ ಮಾಡಲು ಆಗದೇ ಇರುವುದಕ್ಕೆ ನೋವಿದೆ. ಆದಾಗ್ಯೂ ಜೆಡಿಎಸ್‌ ರಾಜ್ಯದಲ್ಲಿ ಬಹುಮತ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಬುಧವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಹಲವು ಕಡೆಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು, ಅಫ್ಜಲ್‌ಪುರ, ಸೇಡಂ, ನವಲಗುಂದ, ರಾಯಭಾಗ, ಕುಡಚಿ, ರಾಯಚೂರು ಗ್ರಾಮೀಣ, ಕೊಪ್ಪಳ, ಸಿಂದಗಿ ಸೇರಿದಂತೆ ಕನಿಷ್ಠ 25 ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆ ಆಗಿದೆ. ಇದರಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿಯೂ ಪೆಟ್ಟು ತಿಂದಿದ್ದೇವೆ. ಕೊನೆಯ ಹಂತದಲ್ಲಿ ಪಾರ್ಟಿ ಫಂಡ್‌ ವಿಚಾರದಲ್ಲಿ ನಾವು ಅಭ್ಯರ್ಥಿಗಳ ನಿರೀಕ್ಷೆಯನ್ನು ಮುಟ್ಟಲು ಆಗಿಲ್ಲ ಎಂದರು.

ಚನ್ನ‍ಪಟ್ಟಣ, ರಾಮನಗರ ಹಾಗೂ ಮಾಗಡಿ ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬಂದಲ್ಲಿ ಮುಂದೇನು ಮಾಡುತ್ತೀರಿ ಎಂಬ ಪ್ರಶ್ನೆಗೆ ಅದರ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದು ಹೇಳಿದರು.

ಮತದಾನದ ಬಳಿಕ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಕೇತಗಾನ ಹಳ್ಳಿಯಲ್ಲಿ ನಾವು ಮತದಾನ ಮಾಡಿದ್ದೇವೆ. ಕುಟುಂಬ ಸಮೇತ ಬಂದು ಇಲ್ಲಿ ಮತದಾನ ಮಾಡಿದ್ದೇವೆ. ರಾಜ್ಯಾದ್ಯಂತ ನಮ್ಮ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಉತ್ತರ ಕರ್ನಾಟಕದಲ್ಲೂ ಉತ್ತಮ ಬೆಂಬಲ ದೊರೆಯುತ್ತಿದೆ. ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ರಾಮನಗರ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ, ಮತದಾನ ಎಂಬುದು ಭಾರತೀಯರಿಗೆ ಸಂವಿಧಾನದಲ್ಲಿ ಸಿಕ್ಕಿರುವ ಹಕ್ಕು. ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು. ಮತದಾನ ಮಾಡುವಾಗ ಜನರು ಜವಾಬ್ದಾರಿಯುತವಾಗಿ ಮತ ಚಲಾವಣೆ ಮಾಡಬೇಕು. ನಾವು ಯಾರಿಗೆ ಮತ ನೀಡುತ್ತೇವೆ ಎಂಬುದು ತುಂಬಾ ಮುಖ್ಯವಾಗುತ್ತದೆ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಕರ್ನಾಟಕದ ಜನತೆ ಮೇಲೆ ಇದೆ. ಕರ್ನಾಟಕದಲ್ಲಿ ಒಂದು ಸ್ಥಿರ ಸರ್ಕಾರ ರಚಿಸಲು ಕನ್ನಡಿಗರು ಮತ ಚಲಾವಣೆ ಮಾಡುತ್ತಾರೆ ಎಂದು ಹೇಳಿದರು.

ರಾಮನಗರದ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ರಾಮನಗರಕ್ಕೆ ಹಲವು ಬಾರಿ ಭೇಟಿ ನೀಡಿದ್ದೇನೆ. ಎಲ್ಲ ಕಡೆ ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ವಿಶ್ವಾಸವನ್ನು ಮೂಡಿಸಿದ್ದಾರೆ. ಕಳೆದ 29 ವರ್ಷಗಳಿಂದ ಕ್ಷೇತ್ರದ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ನಮ್ಮ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಇನ್ನು ರಾಮನಗರದ ಅಭ್ಯರ್ಥಿಯಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದೇನೆ. ರಾಮನಗರವನ್ನು ನವರಾಮನಗರ ನಿರ್ಮಾಣ ಮಾಡುತವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಕ್ಷೇತ್ರದ ಜನರು ಅವರ ಸೇವೆ ಮಾಡಲು ಅವಕಾಶ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುತ್ತದೆ: ಕೆ ಎಸ್ ಈಶ್ವರಪ್ಪ ವಿಶ್ವಾಸ

Last Updated : May 10, 2023, 4:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.