ETV Bharat / state

ಹಾರೋಹಳ್ಳಿಯಲ್ಲಿ ಮಗನ ಪರ ಹೆಚ್​.ಡಿ.ಕುಮಾರಸ್ವಾಮಿ ಮತ ಪ್ರಚಾರ - Ramnagar Constituency

ದೇವೇಗೌಡರು ಮತ್ತು ನನಗೆ ನೀಡಿರುವ ಪ್ರೀತಿ, ಅಭಿಮಾನವನ್ನು ನಿಖಿಲ್ ಕುಮಾರಸ್ವಾಮಿಗೂ ನೀಡಿ ಎಂದು ಹೆಚ್​ಡಿಕೆ ಮನವಿ ಮಾಡಿದರು.

Former CM HD Kumaraswamy
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
author img

By

Published : Apr 30, 2023, 10:55 PM IST

ಹೆಚ್​.ಡಿ ಕುಮಾರಸ್ವಾಮಿ ಪ್ರಚಾರ

ರಾಮನಗರ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಅಬ್ಬರದ ಪ್ರಚಾರ ನಡೆಸಿದರು. ಹಾರೋಹಳ್ಳಿ ಹಾಗೂ ಮರಳವಾಡಿ‌ ಕ್ಷೇತ್ರ ಜೆಡಿಎಸ್ ಭದ್ರ ಕೋಟೆಯಾಗಿದ್ದು, ಮಗನ ಪರವಾಗಿ ತಂದೆ, ತಾಯಿ ಅನಿತಾ ಕುಮಾರಸ್ವಾಮಿ ಇಬ್ಬರೂ ಕೂಡ ಮತ ಯಾಚಿಸಿದರು.

ಹೆಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ದೇವೇಗೌಡರು ಮತ್ತು ನನನ್ನು ಪ್ರೀತಿ, ವಿಶ್ವಾಸದಿಂದ ಕಂಡಿದ್ದೀರಿ. ಅದೇ ರೀತಿಯ ಪ್ರೀತಿ ಅಭಿಮಾನವನ್ನು ನಿಖಿಲ್ ಕುಮಾರಸ್ವಾಮಿಗೂ ನೀಡಿ. ನಮ್ಮನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನತೆ. ಹಾರೋಹಳ್ಳಿ, ಮರಳವಾಡಿ ಜನರು ಶಕ್ತಿ ನೀಡಿದ್ದೀರಿ. ನೀವು ನೀಡಿದ ಶಕ್ತಿಯಿಂದ ರಾಜ್ಯದ ಜನರಿಗೆ ಒಳಿತು ಮಾಡಲು ಸಾಧ್ಯವಾಗಿದೆ ಎಂದರು.

ನೀವು ಕೊಟ್ಟ ಶಕ್ತಿಯಿಂದ ಜೆಡಿಎಸ್​ ಏಕಾಂಗಿಯಾಗಿ ಪಕ್ಷ ಕಟ್ಟಲು ಸಾಧ್ಯವಾಗಿದ್ದು, ನಿಮ್ಮ ಪ್ರೀತಿ ಅಭಿಮಾನವನ್ನು ನನ್ನ ಜೀವನದ ಕಡೆಯತನಕ ಮರೆಯುವುದಿಲ್ಲ. ಜೆಡಿಎಸ್​ ಪಕ್ಷಕ್ಕೆ ದೊರೆತ ಬೆಂಬಲ ಕಂಡು ವಿಪಕ್ಷಗಳು ವಿಚಲಿತವಾಗಿವೆ. ಇಂದು ಪ್ರಧಾನಮಂತ್ರಿಯಾದಿಯಾಗಿ ಹಲವು ನಾಯಕರ ದಂಡೇ ರಾಜ್ಯಕ್ಕೆ ಬರುತ್ತಿದ್ದಾರೆ. ಆದರೆ ನಾನು ಆರೋಗ್ಯವನ್ನು ಲೆಕ್ಕಿಸಿದೇ ರಾಜ್ಯಾದ್ಯಂತ ಓಡಾಟ ನಡೆಸುತ್ತಿದ್ದೇನೆ. ನಿಮ್ಮ ಒತ್ತಾಯದ ಮೇರೆಗೆ ನಿಖಿಲ್ ಕುಮಾರಸ್ವಾಮಿ ನಿಂತಿದ್ದಾರೆ. ನನಗಿಂತ ಹೃದಯ ವೈಶಾಲ್ಯತೆಯನ್ನು ನಿಖಿಲ್ ಹೊಂದಿದ್ದಾರೆ ಎಂದರು.

ಈ ಭಾಗದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸಾಗುವಳಿ ಚೀಟಿ ದೊರಕಿಸಿಕೊಟ್ಟಿದ್ದಾರೆ. ತಾಲೂಕಿನ ಅಭಿವೃದ್ಧಿ ಬಗ್ಗೆ ಅವರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ನಾಡಿನ ಜನರು ನೆಮ್ಮದಿಯಿಂದ ಬದುಕಲು ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತಿದೆ. ವರ್ಷಕ್ಕೆ ಐದು ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗುವುದು. ದೇವೇಗೌಡರು ನೀಡಿದ್ದ 4% ಮೀಸಲಾತಿ ರದ್ದು ಮಾಡಿದ್ದಾರೆ. ನಮ್ಮ ಸರ್ಕಾರದಲ್ಲಿ ಎಲ್ಲ ವರ್ಗಗಳಿಗೂ ನ್ಯಾಯ ಕೊಡಿಸಲಾಗುವುದು. ರೈತರು, ಯುವಕರು ಸೇರಿದಂತೆ ಮಹಿಳೆಯರು ಸ್ವಾಭಿಮಾನದಿಂದ ಬದುಕು ನಡೆಸಲು ಯೋಜನೆ ರೂಪಿಸಲಾಗುವುದು ಎಂದು ಹೆಚ್​ಡಿಕೆ ಹೇಳಿದರು.

ನಿಖಿಲ್​ ಕುಮಾರಸ್ವಾಮಿ ಮಾತನಾಡಿ, ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾ ಇರೋದು ನನ್ನ ಸೌಭಾಗ್ಯ. ಈ ಭಾಗದಲ್ಲಿ ಅನಿತಾ ಕುಮಾರಸ್ವಾಮಿ ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ ಪ್ರಚಾರ ಪಡೆಯಲಿಲ್ಲ. ಪಂಚರತ್ನ ರಥಯಾತ್ರೆ ವೇಳೆ ಅನಿತಾ ಕುಮಾರಸ್ವಾಮಿ ನನ್ನ ಹೆಸರು ಘೋಷಣೆ ಮಾಡಿದರು. ನನಗೆ ಇದು ಅನಿರೀಕ್ಷಿತ ಬೆಳವಣಿಗೆ. ಅವರು ನನ್ನನ್ನು ಮನಸಾರೆ ಹರಸಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಜನಿಸಿದ್ದು ನಮ್ಮ ಪುಣ್ಯ ಎಂದು ಹೇಳಿದರು.

ಇದನ್ನೂ ಓದಿ : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಪ್ರಧಾನಿಗೆ ಹೂಮಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.