ರಾಮನಗರ : ಕೊರೊನಾ ನಿಯಂತ್ರಣಕ್ಕಾಗಿ ರೈತರಿಗೆ ಅನುಕೂಲವಾಗಲೆಂದು ರಾಮನಗರದಲ್ಲಿ ಸ್ಥಾಪಿಸಿರುವ ಕೊರೊನಾ ಟನಲ್ಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.
ನಂತರ ಈ ಬಗ್ಗೆ ಮಾತನಾಡಿದ ಹೆಚ್‌ಡಿಕೆ, ಸಾರ್ವಜನಿಕರು ಹೆಚ್ಚು ಓಡಾಡುವ ಸ್ಥಳದಲ್ಲಿ ತಮಿಳುನಾಡಿನ ಜಿಲ್ಲಾಧಿಕಾರಿಯೊಬ್ಬರು ಟನಲ್ ಮಾಡುವ ಮೂಲಕ ರೋಗವನ್ನ ತಾತ್ಕಾಲಿಕವಾಗಿ ತಡೆಯುವುದಕ್ಕೆ ಶುರು ಮಾಡಿದ್ದರು. ಅದನ್ನ ನೋಡಿ ರೈತರಿಗೆ ಸಹಾಯವಾಗಲೆಂದು ನಮ್ಮಲ್ಲೂ ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲೇ ಇದೇ ಮೊದಲ ಕೊರೊನಾ ನಿವಾರಕ ಟನಲ್‌ಗೆ ಚಾಲನೆ ನೀಡಲಾಗಿದೆ. ರೈತರು, ವ್ಯಾಪಾರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಹಿನ್ನೆಲೆಯಲ್ಲಿ ರಾಮನಗರ, ಚನ್ನಪಟ್ಟಣ ಎಪಿಎಂಸಿ, ರೇಷ್ಮೆ ಮಾರುಕಟ್ಟೆಯಲ್ಲಿ ಟನಲ್ಗಳಿಗೆ ಚಾಲನೆ ನೀಡಲಾಗಿದೆ ಎಂದ ಹೆಚ್‌ಡಿಕೆ ಹೇಳಿದರು.