ETV Bharat / state

ರಾಜ್ಯದ ಜನರು ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ಕೊಡುವ ದಿನಗಳು ದೂರವಿಲ್ಲ: HDK - support for the regional party

ನಮ್ಮಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ನೆಲ, ಜನ, ಭಾಷೆಯ ಸಮಸ್ಯೆ ಉದ್ಭವಿಸುವುದಿಲ್ಲ. ಹಾಗಾಗಿ ರಾಜ್ಯದ ಜನರು ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ಕೊಡಬೇಕಿದೆ. ಆ ದಿನಗಳು ದೂರವಿಲ್ಲ, ಜನರು ಪ್ರಾದೇಶಿಕತೆಗೆ ಬೆಂಬಲ ಕೊಡ್ತಾರೆ ಎಂದು ಮಾಜಿ ಸಿಎಂ ಹೆಚ್​ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

hd kumaraswamy
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
author img

By

Published : Jun 29, 2021, 5:55 PM IST

ರಾಮನಗರ: ಕರ್ನಾಟಕ - ಕೇರಳ ಗಡಿಯಲ್ಲಿನ ಊರುಗಳಿಗೆ ಕನ್ನಡದ ಹೆಸರು ಬದಲಾವಣೆ ವಿಚಾರ ಸಂಬಂಧ ಅಲ್ಲಿನ‌ ಸಿಎಂಗೆ ನಮ್ಮ ಸಿಎಂ ಪತ್ರ ಬರೆದಿದ್ದಾರೆ. ನಾನು ಸಹ ಈ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆದಿದ್ದು, ಪತ್ರ ಬರೆದಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿಕೆ, ಊರುಗಳಿಗೆ ಕನ್ನಡದ ಹೆಸರು ಬದಲಾವಣೆ ಸಂಬಂಧ ಆ ರೀತಿಯ ಬೆಳವಣಿಗೆ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇರಳ ಸರ್ಕಾರದವರು ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ಇಂತಹ ವಿಚಾರಗಳು ಬಂದಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಇನ್ನು ರಾಜ್ಯ ಸರ್ಕಾರ ನಾಡಿನ, ಜಲದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು. ಇಂತಹ ವಿಚಾರಗಳ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಅಲ್ಲಿನ ಮಂಜೇಶ್ವರ ಶಾಸಕ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ‌. ಕನ್ನಡದ ವಿಚಾರವಾಗಿ ಅವರು ಗೌರವ ಮೆರೆದಿದ್ದಾರೆ. ಆದರೆ, ನಮ್ಮ ರಾಜ್ಯದ ಜನಪ್ರತಿನಿಧಿಗಳು ಮಾತ್ರ ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೇ ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕೃತ ವಿರೋಧ ಪಕ್ಷವಾಗಿದೆ. ಆದರೆ, ಆ ಪಕ್ಷದ ನಾಯಕರು ಮಾತ್ರ ಕಾಸರಗೋಡು ವಿಚಾರವಾಗಿ ಚಕಾರ ಎತ್ತುತ್ತಿಲ್ಲ. ರಾಜ್ಯಕ್ಕೆ ಇಂತಹ ಪರಿಸ್ಥಿತಿ ಬರಲು ಕಾಂಗ್ರೆಸ್ - ಬಿಜೆಪಿ ರಾಷ್ಟ್ರೀಯ ಪಕ್ಷಗಳು ಕಾರಣವಾಗಿದೆ. ತಮಿಳುನಾಡಿನ ಪ್ರಾದೇಶಿಕ ಪಕ್ಷಗಳು ರಾಜಕೀಯ ಮಾಡುತ್ತವೆ.

ಆದರೆ, ಅಲ್ಲಿನ ಜಲದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಜನರು ತಿರಸ್ಕಾರ ಮಾಡುತ್ತಾರೆ. ನಮ್ಮಲ್ಲಿಯೂ ಸಹ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಈ ಸಮಸ್ಯೆ ಇರುವುದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: 'ಕನ್ನಡ ಕೇಂದ್ರಿತ' ರಾಜಕಾರಣ ಕರ್ನಾಟಕದಲ್ಲಿ ಪರ್ಯಾಯ ರಾಜಕಾರಣ ಮೂನ್ಸೂಚನೆ ನೀಡುತ್ತಿದೆ : ವೈಎಸ್‌ವಿ ದತ್ತ

ಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ನಿಲುವಿಗೆ ಬೆಂಬಲ ಕೊಡುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಈ ವಿಚಾರವಾಗಿ ರಾಷ್ಟ್ರೀಯ ಪಕ್ಷಗಳು ಬೆಂಬಲ ಕೊಡಲ್ಲ. ಹಾಗಾಗಿ ರಾಜ್ಯದ ಜನರು ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ಕೊಡಬೇಕಿದೆ. ಆ ದಿನಗಳು ದೂರವಿಲ್ಲ, ಜನರು ಪ್ರಾದೇಶಿಕತೆಗೆ ಬೆಂಬಲ ಕೊಡ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.