ETV Bharat / state

ವೈದ್ಯರ ಸಲಹೆ ಮೇರೆಗೆ ಒಂದು ವಾರ ಕಾಲ ಹೆಚ್​ಡಿಕೆ ವಿಶ್ರಾಂತಿ - ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ವಿಶ್ರಾಂತಿ

ಕನಿಷ್ಠ ಒಂದು ವಾರವಾದರೂ ಯಾರನ್ನೂ ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

hd-kumaraswamy-taking-rest-for-one-week
ವೈದ್ಯರ ಸಲಹೆ ಮೇರೆಗೆ ಒಂದು ವಾರ ಕಾಲ ಹೆಚ್​ಡಿಕೆ ವಿಶ್ರಾಂತಿ
author img

By

Published : Jun 10, 2022, 10:43 PM IST

ರಾಮನಗರ/ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಕನಿಷ್ಠ ಒಂದು ವಾರವಾದರೂ ಯಾರನ್ನೂ ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬೇಡಿ ಎಂದು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಎಂದಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ. ದಯಮಾಡಿ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಯಲ್ಲಿ ನಿರ್ಮಲಾ, ಜಗ್ಗೇಶ್‌, ಲೆಹರ್‌ ಸಿಂಗ್‌, ಜೈರಾಂ ರಮೇಶ್‌ಗೆ ಗೆಲುವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.