ರಾಮನಗರ: ಕೋವಿಡ್ ಪರಿಸ್ಥಿತಿಯ ಕುರಿತಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ತುಮಕೂರು ಜಿಲ್ಲೆಯ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪ್ರಮುಖ ನಾಯಕರೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಹೆಚ್‌ಡಿಕೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮನೆಯಿಂದಲೇ ವಿಡಿಯೋ ಸಂವಾದ ನಡೆಸಿದ್ದು, ಕೋವಿಡ್ ಆರೈಕೆ ಕೇಂದ್ರಗಳ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇದೆ ಎಂದು ತುಮಕೂರು ಜಿಲ್ಲಾ ಜೆಡಿಎಸ್ ಜನಪ್ರತಿನಿಧಿಗಳು ತಿಳಿಸಿದರು. ಈ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುವುದಾಗಿ ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: ಸರಳವಾಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡ ಗೌಡರಿಗೆ ಗಣ್ಯರಿಂದ ಶುಭಾಶಯ!
ನಿನ್ನೆಯಷ್ಟೇ ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ್ದ ಬೆನ್ನಲ್ಲೇ ಇಂದು ತುಮಕೂರು ಜಿಲ್ಲೆಯ ಪಕ್ಷದ ಜನಪ್ರತಿನಿಧಿಗಳೊಂದಿಗೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.