ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ. ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜಾತಿ ರಾಜಕೀಯದ ಹೋರಾಟ ದಾರಿ ತಪ್ಪುವ ಮುನ್ನ ಸರ್ಕಾರ ಎಚ್ಚರಗೊಳ್ಳಲಿ; ಹೆಚ್ಡಿಕೆ - ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ
ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಅದು ಸಭಾಪತಿ ಸ್ಥಾನಕ್ಕಾಗಿ ಮೈತ್ರಿಯಾಗಿದ್ದೇವೆ. ಅದನ್ನ ಬಿಟ್ಟು ಬೇರೆ ರೀತಿ ಹೊಂದಾಣಿಕೆ ಇಲ್ಲ. ವಿಷಯಾಧಾರಿತವಾಗಿ, ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿಯಾಗ್ತೇವೆ. ಜನವಿರೋಧಿ ನೀತಿಗಳ ವಿರುದ್ಧ ಎಂದಿಗೂ ರಾಜಿಯೇ ಇಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಮನಗರದಲ್ಲಿ ಹೇಳಿದ್ರು.
![ಜಾತಿ ರಾಜಕೀಯದ ಹೋರಾಟ ದಾರಿ ತಪ್ಪುವ ಮುನ್ನ ಸರ್ಕಾರ ಎಚ್ಚರಗೊಳ್ಳಲಿ; ಹೆಚ್ಡಿಕೆ hd kumarswamy reaction in ramnagar](https://etvbharatimages.akamaized.net/etvbharat/prod-images/768-512-10534525-thumbnail-3x2-surya.jpg?imwidth=3840)
ರಾಮನಗರ
ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ. ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದರು.
ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಭಾಪತಿ ಸ್ಥಾನಕ್ಕಾಗಿ ಮೈತ್ರಿಯಾಗಿದ್ದೇವೆ. ಅದನ್ನ ಬಿಟ್ಟು ಬೇರೆ ರೀತಿ ಹೊಂದಾಣಿಕೆ ಇಲ್ಲ. ವಿಷಯಾಧಾರಿತವಾಗಿ, ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿಯಾಗ್ತೇವೆ. ಜನವಿರೋಧಿ ನೀತಿಗಳ ವಿರುದ್ಧ ಎಂದಿಗೂ ರಾಜಿ ಇಲ್ಲ ಎಂದರು.
ಇದಲ್ಲದೆ ದೆಹಲಿಯಲ್ಲಿನ ರೈತರ ಹೋರಾಟದ ಬಗ್ಗೆ ಪ್ರತಿಕ್ರಿಯೆಸಿ, ಪ್ರಧಾನಮಂತ್ರಿಗೆ ರೈತರ ಬಗ್ಗೆ ಗೌರವ ಇದ್ದರೆ ಅವರನ್ನು ಕರೆದು ಸಭೆ ಮಾಡಬೇಕಿತ್ತು. ಕೃಷಿ ಮಂತ್ರಿಯನ್ನ ಬಿಟ್ಟು ಸಭೆ ಮಾಡಿಸುವ ಬದಲು ಇವರೇ ಸಭೆ ಮಾಡಲಿ. ಅವರ ಕಾಯ್ದೆಗಳಿಂದ ರೈತರಿಗೆ ಅನುಕೂಲ ಏನು ಎಂದು ತಿಳಿಸಲಿ. ರೈತರ ಗೊಂದಲಗಳಿಗೆ ಮನವರಿಕೆ ಮಾಡಲಿ ಎಂದ್ರು. ಈಗ ರೈತರು ಮುಂದಿನ ಅಕ್ಟೋಬರ್‌ವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ. ಕಳೆದ 70 ದಿನಕ್ಕೂ ಹೆಚ್ಚು ದಿನಗಳಿಂದ ದೆಹಲಿಯಲ್ಲಿ ಹೋರಾಟ ಮಾಡ್ತಿದ್ದಾರೆ. ಹಾಗಾಗಿ ದೇಶದಲ್ಲಿ ಶಾಂತಿ ಕಾಪಾಡಲು ಪ್ರಧಾನಮಂತ್ರಿ ಕ್ರಮವಹಿಸಬೇಕು ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.