ETV Bharat / state

ಮೈತ್ರಿ ಸರ್ಕಾರ ಬಿದ್ದ ಮೇಲೆ ರಾಜಕೀಯ ಸಾಕೆನಿಸಿತ್ತು... ಆದ್ರೆ

ಕಾಂಗ್ರೆಸ್ ಜೊತೆ ಮೈತ್ರಿಗಿನ ಮೈತ್ರಿ ಸರ್ಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು ಎಂದು ಹೆಚ್​ಡಿಕೆ ಹಂಚಿಕೊಂಡಿದ್ದಾರೆ.

ಹೆಚ್​ಡಿಕೆ
ಹೆಚ್​ಡಿಕೆ
author img

By

Published : Oct 5, 2021, 2:35 AM IST

ರಾಮನಗರ: ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್​​ಸಿ, ಎಸ್​ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದರು.

ರಾಜಕೀಯ ಸಾಕೆನಿಸಿತ್ತು...

ಕಾಂಗ್ರೆಸ್ ಜೊತೆ ಮೈತ್ರಿಗಿನ ಮೈತ್ರಿ ಸರ್ಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ಬಿಡದಿಯ ತೋಟ ಸೇರಿಕೊಂಡೆ. ನಂಗೆ ನೆಮ್ಮದಿ ಬೇಕಿತ್ತು. ಸಮ್ಮಿಶ್ರ ಸರ್ಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿ, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರ್ಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರ್ಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದರು.

ಮೈತ್ರಿ ಸರ್ಕಾರ ಬಿದ್ದ ಮೇಲೆ ನಾನು ಬಿಡದಿ ತೋಟಕ್ಕೆ ಬಂದೆ. ದಿನವೂ ಕಾರ್ಯಕರ್ತರು ಬರುತ್ತಿದ್ದರು. ಪಕ್ಷದ ಮೇಲಿನ ಅವರ ಪ್ರೀತಿ, ಬದ್ಧತೆ ನನ್ನ ರಾಜಕೀಯ ನಿವೃತ್ತಿಯ ನಿರ್ಧಾರವನ್ನು ಬದಲಿಸಿತು. ಬಿಡದಿಯಲ್ಲಿ ನೀವು ಕೂತಿರುವ ಈ ಜಾಗ ಹಾಗೂ ಈ ತೋಟ ನನ್ನ ಪಾಲಿನ ಪುಣ್ಯಭೂಮಿ. ನನ್ನ ಕಷ್ಟದ ದುಡಿಮೆಯಿಂದ 1983ರಲ್ಲಿ ಈ ಭೂಮಿಯನ್ನು ಖರೀದಿ ಮಾಡಿದೆ. ಕೃಷಿ ಮಾಡುವ ಉದ್ದೇಶ ನನಗಿತ್ತು. ಆದರೆ ಈ ಭೂಮಿ ನನ್ನನ್ನು ರಾಜಕೀಯಕ್ಕೆ ಎಳೆದು ತಂದಿದೆ ಎಂದರು ತಿಳಿಸಿದರು.

ಈ ಕಾರ್ಯಾಗಾರ ಸ್ಥಳದ ಎರಡೂವರೆ ಎಕರೆ ಜಾಗದಲ್ಲಿ ನನ್ನ ತಂದೆ-ತಾಯಿ ಹೆಸರಲ್ಲಿ ಶಾಶ್ವತವಾದ ಒಂದು ಅನಾಥಾಶ್ರಮ, ಒಂದು ದೇಗುಲ ಹಾಗೂ ಎಂದು ಛತ್ರ ಕಟ್ಟುವ ಉದ್ದೇಶ ಇದೆ. ಅದನ್ನು ಮಾಡಲು ಈ ಕಾರ್ಯಕ್ರಮದ ಜಾಗ ಮೀಸಲು ಇಟ್ಟಿದ್ದೇನೆ. ಇದು ಎಲ್ಲರಿಗೂ ಮುಕ್ತವಾಗಿರುತ್ತದೆ. ಇಂತಹ ಜಾಗದಿಂದಲೇ ಪಕ್ಷ ಮತ್ತೆ ಪುಟಿದೇಳುತ್ತಿದೆ. ಈಗ ಎಲ್ಲವೂ ಶುಭಾರಂಭ ಆಗಿದೆ. ಇನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಅದನ್ನು ಎಲ್ಲರೂ ಚಾಚೂ ತಪ್ಪದೇ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಮುಂದೆ ನಾನು ಮುಖ್ಯಮಂತ್ರಿ ಆಗುವ ಉದ್ದೇಶಕ್ಕೆ ಮಾಡುತ್ತಿರುವ ಕಾರ್ಯಾಗಾರ ಇದಲ್ಲ. ರಾಜ್ಯದ ಭವಿಷ್ಯಕ್ಕಾಗಿ ಇದು. ಎಲ್ಲರೂ ಯೋಧರಂತೆ ಕೆಲಸ ಮಾಡಬೇಕು. ರಾಷ್ಟ್ರೀಯ ಪಕ್ಷಗಳು ದಲಿತ-ಹಿಂದುಳಿದ ಜನರಿಗೆ ಮಾಡಿದ್ದೇನು? ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ಜನರಿಗೆ ಕೊಟ್ಟಿದೇನು ಇಲ್ಲ. ಐದು ವರ್ಷ ಸಿಎಂ ಆಗಿದ್ದ ಅವರು ಎಷ್ಟೆಲ್ಲ ಅಭಿವೃದ್ಧಿ ಮಾಡಬೇಕಿತ್ತು, ಆದರೆ ಮಾಡಲಿಲ್ಲ ಎಂದು ದೂರಿದರು.

ಸಿದ್ದರಾಮಯ್ಯ ಅವರು 85,000 ಕೋಟಿ ರೂಪಾಯಿ ಹಣವನ್ನು ದಲಿತ ಸಮುದಾಯದ ಉದ್ಧಾರಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದ್ದರು. ಆದರೆ ಆಗಿದೆಯಾ? ಯಾರಿಗೆ ಹೋಯಿತು ಆ ದುಡ್ಡು? ಗಂಗಾ ಕಲ್ಯಾಣ ಯೋಜನೆಯಲ್ಲೂ 2016ರಿಂದ ಯಾರಿಗೂ ಉಪಯೋಗವಾಗಿಲ್ಲ. ನಿಜವಾದ ಒಬ್ಬ ಫಲಾನುಭವಿಯನ್ನೂ ಗುರುತಿಸಿಲ್ಲ ಎಂದು ಕಿಡಿಕಾರಿದರು.

ಇನ್ನು ಕುರಿ ಸತ್ತರೆ 5000 ರೂ. ಕೊಡಲಾಗುವುದು ಎಂದಿದ್ದರು ಸಿದ್ದರಾಮಯ್ಯ. ಬೆಳಗಾವಿಯಲ್ಲಿ ಭೀಮಪ್ಪ ಎಂಬಾತನ 30 ಕುರಿಗಳ ಮೇಲೆ ಮಣ್ಣು ಕುಸಿದು ಸತ್ತು ಹೋದವು. ಸಿಎಂ ಕಚೇರಿ ಹತ್ತಿರ ಹೋದರೆ ಆತನಿಗೆ ಏನು ಆಗಲಿಲ್ಲ. ಸಿದ್ದರಾಮಯ್ಯ ಕಣ್ಣೆತ್ತಿ ನೋಡಲಿಲ್ಲ. ಕುರುಬ ಸಮುದಾಯದ ವ್ಯಕ್ತಿ ಆತ. ನಾನು 25000 ಕೊಟ್ಟು ಎರಡು ಕುರಿಯನ್ನು ನೀಡಿ ಕಳಿಸಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.