ETV Bharat / state

ತೋಟ ಖರೀದಿಸಿ ಕೃಷಿ ಪ್ರಾರಂಭಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

author img

By

Published : Jul 16, 2021, 5:13 PM IST

ರಾಮನಗರ, ಚನ್ನಪಟ್ಟಣದ ಜನರಿಗೆ ಅನುಕೂಲವಾಗಲೆಂದು ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿಯೇ ವಾಸ್ತವ್ಯ ಹೂಡಿದ್ದೇನೆ. ಬೆಳಗ್ಗೆ 8 ರಿಂದ 11 ರವರೆಗೆ ಕ್ಷೇತ್ರದ ಜನರನ್ನ ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

H.D.Kumaraswamy
ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ರೈತರ ಅಭಿವೃದ್ಧಿಗಾಗಿ ಈಗಾಗಲೇ ಹೊಸ ಚಿಂತನೆ ಮಾಡಿದ್ದೇನೆ. ಅದಕ್ಕಾಗಿ ಬಿಡದಿ ಬಳಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ವ್ಯವಸಾಯ ಮಾಡ್ತಿದ್ದೇನೆ.‌ ರಾಜಕೀಯಕ್ಕೆ ಬರುವ ಮುನ್ನವೇ ತೋಟ ಖರೀದಿ ಮಾಡಿದ್ದೆ. ಈಗ ತೋಟದಲ್ಲಿ ಕೃಷಿ ಪ್ರಾರಂಭ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪ್ರವಾಸ ಹಮ್ಮಿಕೊಂಡಿರುವ ಅವರು, ತಾಲೂಕು ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಅಭಿಯಾನಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸುವ ಮೂಲಕ ಚಾಲನೆ ಕೊಟ್ಟರು.

ಎತ್ತಿನ ಗಾಡಿಯಲ್ಲಿ ಆಗಮಿಸಿ ಕೃಷಿ ಅಭಿಯಾನಕ್ಕೆ ಚಾಲನೆ ಕೊಟ್ಟ ಹೆಚ್​ಡಿಕೆ

ನಂತರ ಮಾತನಾಡುತ್ತಾ, ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ 6 ತಿಂಗಳಿಂದ ತೋಟದಲ್ಲಿ ಕೃಷಿ ಕೆಲಸ ನಡೆಯುತ್ತಿದೆ. ರಾಜಕೀಯಕ್ಕೆ ಬರುವ ಮುನ್ನವೇ ತೋಟ ಖರೀದಿ ಮಾಡಿದ್ದೆ ಎಂದರು.

ಬೆಂಗಳೂರಿನ ಜೆ.ಪಿ ನಗರದ ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಾಗದೆ ಎಷ್ಟೋ ಜನ ಕಾರ್ಯಕರ್ತರು ಬೇಸರದಿಂದ ವಾಪಸ್ಸಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಳೆದ 7 ತಿಂಗಳಿನಿಂದ ಈ ಕುರಿತು ಸಿದ್ಧತೆ ನಡೆಸಿದ್ದೇನೆ. ಜನರಿಗೆ ಮತ್ತಷ್ಟು ಹತ್ತಿರವಾಗಲು ನಾನು ಇಲ್ಲಿಗೆ ಬಂದಿದ್ದೇನೆ. ನನ್ನ ಕ್ಷೇತ್ರಗಳಾದ ರಾಮನಗರ, ಚನ್ನಪಟ್ಟಣದ ಜನರಿಗೆ ಅನುಕೂಲವಾಗಲೆಂದು ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿಯೇ ವಾಸ್ತವ್ಯ ಹೂಡಿದ್ದೇನೆ.

ಬೆಳಗ್ಗೆ 8 ರಿಂದ 11 ರವರೆಗೆ ಕ್ಷೇತ್ರದ ಜನರನ್ನ ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಅವರ ಅಹವಾಲುಗಳನ್ನು ಸ್ವೀಕರಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಜನರೊಂದಿಗೆ ಸಂಪರ್ಕ ಸಾಧಿಸುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.