ರಾಮನಗರ: ಇಬ್ಬರು ಹಿರಿಯ ನಾಯಕರು. ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದು ಸರಿಯಲ್ಲ. ವಿಶ್ವನಾಥ್ ಅವರು ಹಿರಿಯರಿದ್ದಾರೆ, ಅವರು ಏನಾದ್ರು ಮಾತನಾಡಿಕೊಳ್ಳಲಿ. ಸಾ.ರಾ.ಮಹೇಶ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಹೇಳಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ಕ್ಷೇತ್ರಕ್ಕೆ ಹಿಂದಿನ ಸರ್ಕಾರದಲ್ಲಿ ನೀಡಿದ ಅನುದಾನ ಕಡಿತ ಮಾಡಿರುವುದಕ್ಕೆ ಬೇಸರವಾಗಿ ಸಾ.ರಾ.ಮಹೇಶ್ ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಅದಾದ ಬಳಿಕ ಅವರು ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ ಎಂದರು.
ಜೆಡಿಎಸ್ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ, ಇದೆಲ್ಲ ಕೇವಲ ಸುಳ್ಳು ವದಂತಿ. ಅಂತಹ ಮನಸ್ಥಿತಿಯಲ್ಲಿ ಯಾವ ಶಾಸಕರೂ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.