ETV Bharat / state

ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ: ಹೆಚ್​ ಡಿ ಕುಮಾರಸ್ವಾಮಿ ಘೋಷಣೆ

author img

By

Published : Apr 3, 2023, 7:48 PM IST

ಇದೇ ತಿಂಗಳ 19ರಂದು ನಾನು ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ರಾಮನಗರ : ಈಗಾಗಲೇ ರಾಜ್ಯದಲ್ಲಿ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿದೆ. ಎಲ್ಲಾ ಭಾಗದಲ್ಲೂ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ ಭಾರಿ ಅನಿವಾರ್ಯವಾಗಿ ಒತ್ತಡಕ್ಕೆ ಮಣಿದು ರಾಮನಗರ, ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದೆ. ನೀವು ಅರ್ಜಿ ಹಾಕಿ ನಾವು ನೋಡಿಕೊಳ್ತಿವಿ ಅಂತ ಭರವಸೆ ಕೊಟ್ಟಿದ್ದರು. ಈ ಬಾರಿ ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡೋದಾಗಿ ಮಾಜಿ‌ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

ಅವರು ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಭಾಗವಹಿಸಿ ನಂತರ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅರ್ಜಿ ಹಾಕಿ ಹೋದರೂ ಕೂಡ ನನ್ನನ್ನು ಗೆಲ್ಲಿಸಿದ್ದು ಕ್ಷೇತ್ರದ ಜನರು. ಸ್ಥಳೀಯವಾಗಿ ಕೆಲ ಭಿನ್ನಾಭಿಪ್ರಾಯ ಇರಬಹುದು. ಅದನ್ನ ಕೂತು ಮಾತನಾಡಿ ಸರಿಪಡಿಸಿಕೊಳ್ಳಬಹುದು. ನನಗೆ ಸಂಪೂರ್ಣ ವಿಶ್ವಾಸ ಇದೆ. ಈ ಬಾರಿಯೂ ಗೆಲ್ಲುತ್ತೇವೆ. ಆದರೆ, ಕೆಲವರು ಆತಂಕ ವ್ಯಕ್ತಪಡಿಸಿದ್ದರು. ನಿಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಎಂದು ಹೇಳಿದ್ದರು.

ಚನ್ನಪಟ್ಟಣದಲ್ಲಿ ನಮ್ಮ ಶಕ್ತಿ ದೊಡ್ಡಮಟ್ಟದಲ್ಲಿದೆ: ಆದರೆ, ಅವರಿಗೆ ನಾನು ಒಂದು ಮಾತು ಹೇಳಿದ್ದೇನೆ. ಈ ಬಾರಿ ನಾನು ಒಂದೇ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ. ಅದು ಚನ್ನಪಟ್ಟಣದಲ್ಲಿ ನಮ್ಮ ಶಕ್ತಿ ದೊಡ್ಡಮಟ್ಟದಲ್ಲಿದೆ. ಚನ್ನಪಟ್ಟಣಕ್ಕೆ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ಮೈತ್ರಿ ಸರ್ಕಾರದಲ್ಲಿ ದೊಡ್ಡ ದೊಡ್ಡ ಸವಾಲುಗಳಿದ್ದವು. ಆಗಲೂ ಕೂಡ ನಾನು ರೈತರ ಸಾಲ ಮನ್ನಾ ಮಾಡಿದ್ದೆ. ಕಾಂಗ್ರೆಸ್ ಒತ್ತಡದ ನಡುವೆಯೂ ಉತ್ತಮ ಆಡಳಿತ ಕೊಟ್ಟಿದ್ದೆ. ಆಗ ಚನ್ನಪಟ್ಟಣದ ಕಡೆ ಗಮನಕೊಡ್ತಿಲ್ಲ ಎಂಬ ಅಪಪ್ರಚಾರ ಮಾಡಿದ್ದರು ಎಂದರು.

ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡೋರು ನಮ್ಮ ಸಮಿಶ್ರ ಸರ್ಕಾರ ತೆಗೆದ್ರು. ಈಗ ಫ್ರೀ ಪೋಲ್ ಸರ್ವೆಗಳು ನಡೆಯುತ್ತಿವೆ. ದುಡ್ಡುಕೊಟ್ರೆ ಜೆಡಿಎಸ್​ಗೆ 200 ಸೀಟ್ ಬರುತ್ತೆ ಅಂತಾನೂ ತೋರಿಸಲಾಗುತ್ತೆ. ಹಾಗಾಗಿ ಈ ಫ್ರೀ ಪೋಲ್ ಸರ್ವೆಗಳ ಬಗ್ಗೆ ತಲೆಕೆಡೆಸಿಕೊಳ್ಳಲ್ಲ ಎಂದು ಹೇಳಿದರು.

ಜೆಡಿಎಸ್ ಪಕ್ಷ ಸೇರ್ಪಡೆಗೊಂಡ ಮುಖಂಡರು: ಚನ್ನಪಟ್ಟಣದಲ್ಲಿ ಜೆಡಿಎಸ್​ ಪಕ್ಷ ಸೇರ್ಪಡೆ ಕಾರ್ಯಕ್ರಮ ಮಾಜಿ ಸಿಎಂ ಹೆಚ್‌ಡಿಕೆ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಲಾಯಿತು. ಬಿಜೆಪಿ, ಕಾಂಗ್ರೆಸ್ ತೊರೆದು ಹಲವು ಮುಖಂಡರು, ಕಾರ್ಯಕರ್ತರು ಜೆಡಿಎಸ್​ ಸೇರ್ಪಡೆಗೊಂಡರು. ಮಾಜಿ ಸಿಎಂ ಹೆಚ್‌ಡಿಕೆ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸುಣ್ಣಘಟ್ಟ ಬಳಿ ನಡೆದ ಜೆಡಿಎಸ್​ ಪಕ್ಷ ಸೇರ್ಪಡೆ ಕಾರ್ಯಕ್ರಮ ಮಾಡಲಾಯಿತು. ಮಾಜಿ ಸಿಎಂ ಹೆಚ್‌ಡಿಕೆ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಜೆಡಿಎಸ್​ ನೂರಾರು ಮಂದಿ ಅನ್ಯ ಪಕ್ಷಗಳ ಮುಖಂಡರು ಜೆಡಿಎಸ್ ಸೇರ್ಪಡೆಗೊಳ್ಳುವ ಮೂಲಕ ಚನ್ನಪಟ್ಟಣದಲ್ಲಿ ವೃದ್ಧಿಸಿದ ಜೆಡಿಎಸ್​ ಶಕ್ತಿ ಪ್ರದರ್ಶನ ಮಾಡಲಾಯಿತು.

ಮಾಜಿ ಸಚಿವ ಸಿಪಿವೈ ವಿರುದ್ದ ಗರಂ - ಮಾಜಿ‌ ಸಚಿವ ಸಿ ಪಿ ಯೋಗೇಶ್ವರ್ ಇದೀಗ ಚನ್ನಪಟ್ಟಣದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ತಿರುಗುತ್ತಿದ್ದಾರೆ. 20 ವರ್ಷ ಶಾಸಕರಾಗಿ ಅವರು ಸಾಧಿಸಿದ್ದಾದರೂ ಏನು? ಅವರು ಅಭಿವೃದ್ಧಿ ಮಾಡಿದ್ರೆ ನನಗೆ ಮಾಡಲು ಕೆಲಸ ಇರ್ತಾ ಇರಲಿಲ್ಲ. ಈಗ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದಿದ್ದೇನೆ ಅಂತ ಕೆಲವರು ಓಡಾಡುತ್ತಿದ್ದಾರೆ.

ಆದರೆ, ನನ್ನ ಹೆಸರು ಹೇಳ್ಕೊಂಡೆ ಅನುದಾನ ತರಬೇಕು. ಇಲ್ಲಿ ಕುಮಾರಸ್ವಾಮಿನ ಸೋಲಿಸ್ತೀನಿ ಅಂತ ದುಡ್ಡು ತರ್ತಿದ್ದಾರೆ. ಕೋವಿಡ್ ಸಮಯದಲ್ಲಿ ಈ ವ್ಯಕ್ತಿಗಳು ಎಲ್ಲಿಗೆ ಹೋಗಿದ್ದರು?. ಚುನಾವಣೆ ಸಂದರ್ಭದಲ್ಲಿ ಮಾತ್ರ ಇವರು ಬರುತ್ತಾರೆ. ನನಗೆ ಇನ್ನೊಂದು ವರ್ಷ ಅಧಿಕಾರ ಇದ್ದಿದ್ದರೆ ಎಲ್ಲಾ ಸಮಸ್ಯೆ ಬಗೆಹರಿಸುತ್ತಿದ್ದೆ. ನನ್ನ ಅಧಿಕಾರ ತೆಗೆದವ್ರು ಇವರೇ. ಈಗ ಕೆಲಸ ಮಾಡಿಲ್ಲ ಅಂತ ಹೇಳ್ತಿರೋರು ಇವರೇ? ಎಂದು ಮಾಜಿ ಸಚಿವ ಸಿಪಿವೈ ವಿರುದ್ಧ ಹೆಚ್‌ಡಿಕೆ ಕಿಡಿ ಕಾರಿದರು.

ಇದಲ್ಲದೆ ಕೋವಿಡ್, ಕಾಲುಬಾಯಿ ಜ್ವರ, ಬೆಳೆ ನಾಶವಾಗಿದ್ದ ವೇಳೆ ಎಲ್ಲಾ ಎಲ್ಲಿದ್ದರು. ಸಂಸದರು ಅಂದು ಹೋದಪುಟ್ಟ ಬಂದಪುಟ್ಟ ಎಂಬಂತೆ ಬಂದ್ರು ಅಷ್ಟೇ.‌ ಕ್ಷೇತ್ರದ ಜನರಲ್ಲಿ ಮನವಿ ಮಾಡ್ತಿನಿ. 2018ರ ರೀತಿಯಲ್ಲಿ ಈ ಚುನಾವಣೆ ನಡೆಸಿಕೊಡಿ. ನೀವೇ ಮುಂದೆ ನಿಂತು ಚುನಾವಣೆ ನಡೆಸಿ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಚುನಾವಣಾ ಜವಾಬ್ದಾರಿಯನ್ನ ಕ್ಷೇತ್ರದ ಕಾರ್ಯಕರ್ತರಿಗೆ ವಹಿಸಿದರು.

ಚನ್ನಪಟ್ಟಣದ ಜನತೆ ಮೇಲೆ ವಿಶ್ವಾಸವಿದೆ: ನನ್ನನ್ನ ನೀವು ರಕ್ಷಣೆ ಮಾಡಿದ್ರೆ ರಾಜ್ಯದ ಬಡವರನ್ನ ನಾನು ರಕ್ಷಣೆ ಮಾಡ್ತೇನೆ. ಈ ಬಾರಿ ನನಗೆ ಶಕ್ತಿ ನೀಡಿ ಎಂದರು. ಚನ್ನಪಟ್ಟಣದ ಜನತೆ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಮನೆ ಮಗನ ರೀತಿಯಲ್ಲಿ ನನಗೆ ಆಶೀರ್ವಾದ ಮಾಡ್ತೀರಿ. ರಾಮನಗರ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ನಿಮ್ಮ ಮನೆ ಮಗನನ್ನ ಬಿಟ್ಟು ಬೇರೆ ಯಾರೂ ಸಿಎಂ ಆಗಲು ಆಗೋದಿಲ್ಲ ಎಂದು ಹೇಳಿದರು.

ನಿಖಿಲ್ ಹೆಚ್ಡಿಕೆ ನಾಮಪತ್ರ ಸಲ್ಲಿಕೆ - ಹಾಗೆಯೇ ಇದೇ ತಿಂಗಳ 19ರಂದು ನಾನು ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಮಾ. 17ರಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಾರೆ. 19ರಂದು ನಾನು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸ್ತೇನೆ. 20 ಹಾಗೂ 21 ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರಚಾರ ಮಾಡ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್​ನ ಎರಡನೇ ಪಟ್ಟಿ ಬಿಡುಗಡೆ ಹಿನ್ನಲೆ ಸಂಬಂಧಿಸಿದಂತೆ ‌ಮಾತನಾಡಿದ ಅವರು, ಹಾಸನ ಕ್ಷೇತ್ರ ಹೊರತುಪಡಿಸಿ ಇಂದು ಸಂಜೆ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಹಾಗೆಯೇ ಹಾಸನ ಟಿಕೆಟ್​ ಬಗ್ಗೆ ಹಲವಾರು ಚರ್ಚೆ ಆಗಿದೆ.‌ ಈ ಬಗ್ಗೆ ಸುಗಮವಾಗಿ ತೀರ್ಮಾನ ಆಗುತ್ತೆ. ಮಾಜಿ ಪ್ರಧಾನಿ‌ ದೇವೇಗೌಡರು ದೆಹಲಿಗೆ ಹೋಗಿದ್ದಾರೆ.

ಮೂರನೇ ಪಟ್ಟಿ ಕೂಡ ಬಿಡುಗಡೆ ಮಾಡಲಾಗುತ್ತದೆ‌: ದೆಹಲಿಯಿಂದ ಬಂದ ಬಳಿಕ ಟಿಕೆಟ್​ ತೀರ್ಮಾನ ಘೋಷಣೆ ಮಾಡಲಾಗುತ್ತದೆ. ಹಾಸನದ ವಿಷಯದಲ್ಲಿ ನನ್ನ ನಿರ್ಧಾರ ಬದಲಾಗಲ್ಲ.‌ ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಎಲ್ಲಾ ಗೊತ್ತಾಗಲಿದೆ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಳ್ಳಲಾಗುತ್ತದೆ.‌ ದೇವೇಗೌಡರು ಜನಾಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಎರಡನೇ ಪಟ್ಟಿಯಲ್ಲಿ ಕೆಲವರ ಹೆಸರುಗಳನ್ನು ಅಂತಿಮ ಮಾಡಲಾಗುತ್ತದೆ. ಹಾಗೂ ಮೂರನೇ ಪಟ್ಟಿ ಕೂಡ ಬಿಡುಗಡೆ ಮಾಡಲಾಗುತ್ತದೆ‌ ಎಂದರು.

ಇದಲ್ಲದೆ ಕನಕಪುರ ತಾಲೂಕಿನ ಸಾತನೂರಿನಲ್ಲಿ ಕಸಾಯಿಖಾನೆಗೆ ಹಸು ಸಾಗಾಣಿಕೆ ವೇಳೆ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎತ್ತುಗಳನ್ನು ಹೋರಿಗಳನ್ನು ತೆಗೆದುಕೊಂಡು ಹೋದ್ರು ಎಂದು ಕೊಲೆ ಮಾಡೋಕೆ ಹೋಗ್ತಾರೆ. ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್​ ಗಿರಿ ಪ್ರದರ್ಶನ ಮಾಡಿದ್ದಾನೆ. ಕನಕಪುರದಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ. ಸರ್ಕಾರಕ್ಕೆ ಏನಾದರೂ ಮಾನ ಮರ್ಯಾದೆ ಇದ್ದರೆ ಅವನನ್ನು ಮೊದಲು ಒದ್ದು ಒಳಗೆ ಹಾಕಬೇಕು. ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ. ಈ ಕೆಲಸವನ್ನು ಮುಸ್ಲಿಂ ಸಮುದಾಯದವರು ಮಾಡಿದ್ದರೆ ಬಿಜೆಪಿಯವರು ಮಹಾನಾಯಕರು ದೇಶ ಬೆಂಕಿ ಹಚ್ಚಿಕೊಂಡಿದೆ ಎಂದು ಕುಣಿಯುತ್ತಿದ್ದರು. ಇವಾಗ ಎಲ್ಲಿ ಹೋಗಿದ್ದಾರೆ ಇವರೆಲ್ಲಾ ಎಂದರು.

ಕೊಲೆ ಮಾಡಿ ಎಂದು ಹಿಂದೂ ಧರ್ಮ ಹೇಳುತ್ತಾ: ಸರ್ಕಾರದವರು ಒಬ್ಬರೂ ಕೂಡ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಮೊದಲು ಪುನೀತ್‌ ಕೆರೆಹಳ್ಳಿಯನ್ನ ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು‌ ಹೆಚ್​ಡಿಕೆ ಇದೇ ವೇಳೆ ತಿಳಿಸಿದರು. ಇಂದು ಸಂಜೆ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಯಾಗಲಿದ್ದು, ಕೆ. ಆರ್ ಪೇಟೆ ಕಾರ್ಯಕ್ರಮ ಮುಗಿಸಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ. ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ಎರಡನೇ ಲೀಸ್ಟ್​​ನಲ್ಲಿ 40 ರಿಂದ 50 ಕ್ಷೇತ್ರದ ಹೆಸರು ಫೈನಲ್ ಆಗಲಿದೆ. ಇನ್ನೊಂದು ನಾಲ್ಕೈದು ದಿನದಲ್ಲಿ ಮೂರನೇ ಪಟ್ಟಿ ಕೂಡಾ ಬಿಡುಗಡೆ ಆಗಲಿದೆ ಎಂದು ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ : ಇಂದು 40-50 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿ ಎಂ ಇಬ್ರಾಹಿಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.