ರಾಮನಗರ: ಚನ್ನಪಟ್ಟಣದ ಮಹದೇಶ್ವರ ನಗರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿಯನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ವಾಹನ ಜಪ್ತಿ ಮಾಡಿರುವ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಈಚರ್ ವಾಹನದಲ್ಲಿ 200ಕ್ಕೂ ಹೆಚ್ಚು ಚೀಲ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. ಚಾಲಕ ಪರ್ವೇಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ದ.ಕನ್ನಡ ಜಿಲ್ಲೆಯ ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ
ಅನ್ನಭಾಗ್ಯ ಯೋಜನೆಯಲ್ಲಿ ಅಂಗನವಾಡಿ ಹಾಗೂ ನ್ಯಾಯ ಬೆಲೆ ಅಂಗಡಿಗಳಿಗೆ ಸೇರಿದ ಅಕ್ಕಿಗೆ ಖದೀಮರು ಕನ್ನ ಹಾಕುತ್ತಿರುವ ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.